ಮಡಿಕೇರಿ: ಜಲಜೀವನ್ ಮಿಷನ್ ಯೋಜನೆ ಅನುಷ್ಠಾನ ಸಂಬಂಧ ಜಿಲ್ಲಾ ನೀರು ಮತ್ತು ನೈರ್ಮಲ್ಯ ಅಭಿಯಾನ ಸಮಿತಿ ಸಭೆಯು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅಧ್ಯಕ್ಷತೆಯಲ್ಲಿ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಸಿಇಒ ಅವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಪ್ರಸಕ್ತ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಕೈಗೊಳ್ಳುವ ನಿಟ್ಟಿನಲ್ಲಿ ಕ್ರಿಯಾಯೋಜನೆಗೆ ಅನುಮೋದನೆ ಸಂಬಂಧ ಚರ್ಚಿಸಲಾಯಿತು.
ಹಾಗೆಯೇ ಎಸ್‍ಡಿಪಿ ಮತ್ತು ನಾನ್ ಎಸ್‍ಡಿಪಿ ಯೋಜನೆಯನ್ನು ಮಾರ್ಪಡಿಸಿ ಕ್ರಿಯಾಯೋಜನೆ ತಯಾರಿಸುವ ಸಂಬಂಧ ಸುದೀರ್ಘ ಚರ್ಚೆ ನಡೆಯಿತು. ಜಲಜೀವನ್ ಮಿಷನ್ ಯೋಜನಾ ಕಾಮಗಾರಿಗಳ ಕುಂದುಕೊರತೆ ಸಂಬಂಧಿಸಿದಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಮಾಹಿತಿ ಪಡೆದರು.
‘ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ತುರ್ತು ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಬೇಕು. ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಗೂ ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕು. ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಗಮನಹರಿಸಬೇಕು ಎಂದು ನಿರ್ದೇಶನ ನೀಡಿದರು.
Kshetra Samachara
20/06/2026 07:02 am
LOADING...