ಕಾಪು ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಪಾಂಗಾಳದಲ್ಲಿ ಶುಕ್ರವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ, ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರು ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಮಂಗಳೂರಿಗೆ ತೆರಳುತ್ತಿದ್ದ ಭಾರತಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.
ಮೃತ ದುರ್ದೈವಿ ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿಯಾಗಿದ್ದ ಶ್ರೀಮತಿ ಭಟ್ (73) ಎಂದು ಗುರುತಿಸಲಾಗಿದೆ. ಪಾಂಗಾಳ ಮತ್ತು ಕಾಪುವಿನಲ್ಲಿ ಮನೆ ಹೊಂದಿದ್ದ ಶ್ರೀಮತಿ ಭಟ್ ಅವರು ಕಾಪುವಿನಿಂದ ಪಾಂಗಾಳಕ್ಕೆ ಆಗಮಿಸಿ ಹಾಲು ಖರೀದಿಸಿದ್ದರು. ಹಾಲು ಖರೀದಿಸಿದ ಬಳಿಕ ಮನೆಗೆ ಮರಳಲು ರಸ್ತೆ ದಾಟುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಶ್ರೀಮತಿ ಭಟ್ ರಸ್ತೆಗೆ ಎಸೆಯಲ್ಪಟ್ಟಿದ್ದು, ತಲೆಗೆ ಗಂಭೀರ ಏಟು ಬಿದ್ದಿದೆ. ವಿಪರೀತ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಬಳಿಕ, ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬುಲೆನ್ಸ್ ಮೂಲಕ ಮೃತದೇಹವನ್ನು ಶವಾಗಾರಕ್ಕೆ ಸಾಗಿಸಲಾಯಿತು.
ಘಟನೆ ಕುರಿತು ಮಾಹಿತಿ ಪಡೆದ ಕಾಪು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.
Kaup, Pangala, Udupi, Mangaluru, National Highway 66, Accident, Woman, Bus, Fatal, Woman killed in Kaup road accident, Fatal bus collision Pangala National Highway 66, Elderly woman dies crossing road, Retired Syndicate Bank employee accident, Bharati Express bus accident Udupi Mangaluru
Kshetra Samachara
20/06/2026 08:19 am
LOADING...