ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ನಟಿ ರುಕ್ಮಿಣಿ ವಸಂತ್‌ಗೆ AI ಕಂಟಕ; ಮೂವರು ಆರೋಪಿಗಳು ಸೈಬರ್ ಪೊಲೀಸ್ರ ಬಲೆಗೆ

ಬೆಂಗಳೂರು: ನಟಿ ರುಕ್ಮಿಣಿ ವಸಂತ್ ಅವರ AI ಬಳಸಿ ಸೃಷ್ಟಿಸಿದ ಅಶ್ಲೀಲ ಫೋಟೋಗಳನ್ನು ವೈರಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಬರ್ ಕಮಾಂಡ್ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ನಟಿ ರುಕ್ಮಿಣಿ ವಸಂತ್ ಅವರ ಎಐ ಬಳಸಿ ಸೃಷ್ಟಿಸಿದ ಅಶ್ಲೀಲ ಫೋಟೋ ವೈರಲ್ ಪ್ರಕರಣದಲ್ಲಿ ಸೈಬರ್ ಕಮಾಂಡ್ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ರವಿಕುಮಾರ್ (24), ಚಂದ್ರಕಾಂತ್ (33) ಮತ್ತು ರಂಜಿತ್ (25) ಎಂದು ಗುರುತಿಸಲಾಗಿದೆ.

ರವಿಕುಮಾರ್ ಬಾಗಲಕೋಟೆ ನಿವಾಸಿಯಾಗಿದ್ದರೆ, ರಂಜಿತ್ ಬೆಂಗಳೂರು ನಗರದ ನಿವಾಸಿ. ಚಂದ್ರಕಾಂತ್ ಮೂಲತಃ ತೀರ್ಥಹಳ್ಳಿಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಈ ಆರೋಪಿಗಳು AI ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ನಟಿ ರುಕ್ಮಿಣಿ ವಸಂತ್ ಅವರ ವಿಡಿಯೋ ಹಾಗೂ ಫೋಟೋಗಳನ್ನು ಅಶ್ಲೀಲವಾಗಿ ಮಾರ್ಪಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು. ಈ ಕೃತ್ಯಕ್ಕೆ ಬಳಸಿದ್ದ ಮೂರು ಮೊಬೈಲ್ ಫೋನ್‌ಗಳನ್ನು ಪೊಲೀಸರು ಬಂಧಿತರಿಂದ ವಶಪಡಿಸಿಕೊಂಡಿದ್ದಾರೆ.

ಬಂಧಿತ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಈ ಪ್ರಕರಣದ ಹಿಂದಿರುವ ಪೂರ್ಣ ಜಾಲವನ್ನು ಭೇದಿಸಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Edited By : Vinayak Patil
PublicNext

PublicNext

20/06/2026 08:19 am

Cinque Terre

2.15 K

Cinque Terre

0

ಸಂಬಂಧಿತ ಸುದ್ದಿ