ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಿತ್ತೂರು: ಹೆದ್ದಾರಿ-48ರಲ್ಲಿ ಅಪಘಾತ - ಹೊತ್ತಿ ಉರಿದ ಲಾರಿಗಳು

ಕಿತ್ತೂರು: ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ-48ರಲ್ಲಿ ಎರಡು ಲಾರಿಗಳ ನಡುವೆ ನಡೆದ ಡಿಕ್ಕಿಯಿಂದಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಚಾಲಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶುಕ್ರವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಲಾರಿ ಮತ್ತು ಹಾಲಿನ ಟ್ಯಾಂಕರ್ ಹೊತ್ತಿ ಉರಿದಿದೆ.

ಬೆಳಗಾವಿ ಕಡೆ ಮಾರ್ಗವಾಗಿ ಗೋವಿನ ಜೋಳ ಮೂಟೆ ಹೊತ್ತು ಸಾಗುತ್ತಿದ್ದ ಲಾರಿಯ ಒಂದು ಬದಿಗೆ ಅದೇ ಮಾರ್ಗವಾಗಿ ವೇಗವಾಗಿ ಸಾಗಿಬಂದ ಹಾಲಿನ‌ ಟ್ಯಾಂಕರ್ ವೇಗವಾಗಿ ಡಿಕ್ಕಿಯಾಗಿದೆ. ಇದರಿಂದ ಉಂಟಾದ ಘರ್ಷಣೆಗೆ ಬೆಂಕಿ ಹೊತ್ತಿಕೊಂಡಿದೆ.

ಕ್ಷಣಾರ್ಧದಲ್ಲಿ ವಾಹನಗಳೆರಡು ಬೆಂಕಿಗೆ ಆಹುತಿಯಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ‌. ಕಿತ್ತೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.‌

Edited By : Vinayak Patil
PublicNext

PublicNext

20/06/2026 10:03 am

Cinque Terre

2.37 K

Cinque Terre

0

ಸಂಬಂಧಿತ ಸುದ್ದಿ