ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕೋಡಿ: ಸಂಕೇಶ್ವರದಲ್ಲಿ ಭೀಕರ ಕೊಲೆ - ಅನೈತಿಕ ಸಂಬಂಧ, ರಸ್ತೆ ಗಲಾಟೆ ಹಿನ್ನೆಲೆ ಇಬ್ಬರ ಬಂಧನ

ಚಿಕ್ಕೋಡಿ: ಅನೈತಿಕ ಸಂಬಂಧ ಹಾಗೂ ರಸ್ತೆ ಅತಿಕ್ರಮಣ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ತಲೆಗೆ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.

ಬಾಬು ಶಂಕರ ಭೂಸಗೋಳ (35) ಕೊಲೆಯಾದ ದುರ್ದೈವಿ ಎಂದು ಗುರುತಿಸಲಾಗಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಮೃತ ಬಾಬು ಶಂಕರ ಭೂಸಗೋಳ ಎಂಬಾತ ಮಹಿಳೆಯೊಬ್ಬಳೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡಿದ್ದ ಮಹಿಳೆಯ ಪತಿ ಹಾಗೂ ಆತನ ಸ್ನೇಹಿತ ಸೇರಿ ಈ ಕೃತ್ಯ ಎಸಗಿದ್ದಾರೆ. ಇದರೊಂದಿಗೆ, ಮೃತ ವ್ಯಕ್ತಿಯು ರಸ್ತೆ ಅತಿಕ್ರಮಣ ಮಾಡಿ ಸಾರ್ವಜನಿಕ ರಸ್ತೆಯನ್ನು ಬಂದ್ ಮಾಡಿದ್ದ ಎನ್ನಲಾಗಿದೆ. ಮೃತನ ನಿರಂತರ ಆಟಾಟೋಪ ಹಾಗೂ ಕಿರುಕುಳಕ್ಕೆ ಬೇಸತ್ತು, ಆರೋಪಿಗಳು ಸಂಚು ರೂಪಿಸಿ ಈ ಭೀಕರ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸಂಕೇಶ್ವರ ಠಾಣೆಯ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಜಾಗೃತರಾದ ಸಂಕೇಶ್ವರ ಪೊಲೀಸರು ತನಿಖೆ ಕೈಗೊಂಡು, ಇಬ್ಬರು ಆರೋಪಿಗಳನ್ನು ತಕ್ಷಣವೇ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಈ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Edited By : Abhishek Kamoji
PublicNext

PublicNext

20/06/2026 10:16 am

Cinque Terre

6.17 K

Cinque Terre

0

ಸಂಬಂಧಿತ ಸುದ್ದಿ