ಹುಬ್ಬಳ್ಳಿ: ಅನೈತಿಕ ಸಂಬಂಧದ ಶಂಕೆ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿ ಗ್ರಾಮದ ಶಾಂತಿನಗರ ಪ್ಲಾಟ್‌ನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಫಕ್ಕೀರಪ್ಪ ಅಲಿಯಾಸ್ ಬಸು ಅಕ್ಕಿವಳ್ಳಿ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶ ಕರಶೆಟ್ಟಿ ಎಂಬಾತನ ಮೇಲೆ ಕೊಲೆ ಆರೋಪ ಕೇಳಿಬಂದಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರಕಾಶ ಕರಶೆಟ್ಟಿಯ ಪತ್ನಿಯೊಂದಿಗೆ ಬಸುವಿಗೆ ಅನೈತಿಕ ಸಂಬಂಧವಿದೆ ಎಂಬ ಅನುಮಾನ ಈ ಹಿಂದೆ ವ್ಯಕ್ತವಾಗಿದ್ದು, ಈ ವಿಚಾರವಾಗಿ ಗ್ರಾಮ ಮಟ್ಟದಲ್ಲಿ ರಾಜೀ ಪಂಚಾಯತಿಯೂ ನಡೆದಿತ್ತು ಎನ್ನಲಾಗಿದೆ. ಆದರೆ ಪಂಚಾಯತಿ ಬಳಿಕವೂ ಇಬ್ಬರ ನಡುವಿನ ಸಂಪರ್ಕ ಮುಂದುವರಿದಿದೆ ಎಂಬ ಶಂಕೆಯಿಂದ ಕೋಪಗೊಂಡ ಪ್ರಕಾಶ ಈ ಕೃತ್ಯ ಎಸಗಿರುವ ಆರೋಪ ಕೇಳಿಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಇನ್ಸಪೆಕ್ಟರ್ ಮುರಗೇಶ ಚೆನ್ನಣ್ಣನವರ ನೇತೃತ್ವದಲ್ಲಿ ತನಿಖೆ ಆರಂಭಿಸಲಾಗಿದ್ದು, ಆರೋಪಿ ಪ್ರಕಾಶ ಕರಶೆಟ್ಟಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ಸಂತೋಷ್ ಪಬ್ಲಿಕ್ ನೆಕ್ಸ್ಟ್ ಹುಬ್ಬಳ್ಳಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/06/2026 01:37 pm
LOADING...