ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಆಗಸ್ಟ್ 15ರೊಳಗೆ ಪಿಂಕ್ ಲೈನ್ ಓಪನ್!

ಬೆಂಗಳೂರು : ರಾಜಧಾನಿ ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಜೀವನಾಡಿಯಾಗಿರುವ 'ನಮ್ಮ ಮೆಟ್ರೋ' ಪ್ರಯಾಣಿಕರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಜವಾಬ್ದಾರಿ ವಹಿಸಿಕೊಂಡ ಬಳಿಕ ಕೃಷ್ಣ ಬೈರೇಗೌಡ ಅವರು ಇಂದು ಬಿಎಂಆರ್‌ಸಿಎಲ್ (BMRCL) ಹಿರಿಯ ಅಧಿಕಾರಿಗಳೊಂದಿಗೆ ತಮ್ಮ ಮೊದಲ ಪ್ರಮುಖ ಪರಿಶೀಲನಾ ಸಭೆ ನಡೆಸಿದ್ದಾರೆ.

ಮೆಟ್ರೋ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಚಿವರು, ಸಿಲಿಕಾನ್ ಸಿಟಿ ಜನರಿಗೆ ನಿಗದಿತ ಸಮಯಕ್ಕೆ ಮೆಟ್ರೋ ಸೇವೆ ಸಿಗಬೇಕೆಂದು ಖಡಕ್ ಸೂಚನೆ ನೀಡಿದ್ದಾರೆ.

ಪ್ರಸ್ತುತ ಬೆಂಗಳೂರಿನಲ್ಲಿ ಮೆಟ್ರೋ ಜಾಲವು ಒಟ್ಟು 96 ಕಿಲೋಮೀಟರ್ ವ್ಯಾಪ್ತಿಯನ್ನು ಹೊಂದಿದೆ. ಆದರೆ ಮುಂದಿನ ದಿನಗಳಲ್ಲಿ ಬಹುನಿರೀಕ್ಷಿತ ಪಿಂಕ್ ಲೈನ್ (Pink Line) ಮತ್ತು ಬ್ಲೂ ಲೈನ್ (Blue Line) ಸಂಪೂರ್ಣವಾಗಿ ಓಪನ್ ಆದರೆ, ನಮ್ಮ ಮೆಟ್ರೋದ ಒಟ್ಟು ನೆಟ್‌ವರ್ಕ್ ಬರೋಬ್ಬರಿ 175 ಕಿಲೋಮೀಟರ್‌ಗೆ ವಿಸ್ತರಣೆಯಾಗಲಿದೆ ಎಂದು ಸಭೆಯ ಬಳಿಕ ಸಚಿವರು ಮಾಹಿತಿ ನೀಡಿದ್ದಾರೆ.

ವಿಶೇಷವಾಗಿ, ದಕ್ಷಿಣ ಬೆಂಗಳೂರಿನ ಜನರಿಗೆ ಕನೆಕ್ಟಿವಿಟಿ ನೀಡುವ ಪಿಂಕ್ ಲೈನ್‌ನ ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ 7.5 ಕಿಮೀ ವ್ಯಾಪ್ತಿಯ 6 ಮೆಟ್ರೋ ಸ್ಟೇಷನ್‌ಗಳನ್ನು ಮುಂಬರುವ ಆಗಸ್ಟ್ 15ರ (ಸ್ವಾತಂತ್ರ್ಯ ದಿನಾಚರಣೆ) ಒಳಗಾಗಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Edited By :
PublicNext

PublicNext

20/06/2026 01:39 pm

Cinque Terre

6.87 K

Cinque Terre

0

ಸಂಬಂಧಿತ ಸುದ್ದಿ