ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಬಿಎಂಆರ್‌ಸಿಎಲ್ (BMRCL) ಅಧಿಕಾರಿಗಳೊಂದಿಗೆ ಮಹತ್ವದ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದಾರೆ. ಐಟಿ ಕಾರಿಡಾರ್ ಹಾಗೂ ಏರ್‌ಪೋರ್ಟ್ ಸಂಪರ್ಕಿಸುವ ಬ್ಲೂ ಲೈನ್ ಮೆಟ್ರೋ ಕಾಮಗಾರಿಗೆ ವೇಗ ನೀಡಲು ಸಚಿವರು ಅಧಿಕಾರಿಗಳಿಗೆ ಮಹತ್ವದ ಡೆಡ್‌ಲೈನ್‌ಗಳನ್ನು ನೀಡಿದ್ದಾರೆ. ಈ ಸಭೆಯಲ್ಲಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡುವ ಹಲವು ಬಿಗ್ ಅಪ್ಡೇಟ್‌ಗಳು ಹೊರಬಿದ್ದಿವೆ.
ಮೆಟ್ರೋ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ಮಾರತಹಳ್ಳಿ ಭಾಗದಲ್ಲಿ ಬ್ಲೂ ಲೈನ್ ಮೆಟ್ರೋ ಟ್ರಯಲ್ ರನ್ ಆರಂಭಿಸುವಂತೆ ಬಿಎಂಆರ್‌ಸಿಎಲ್‌ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇನ್ನು ಬಹುನಿರೀಕ್ಷಿತ ಹೆಬ್ಬಾಳದಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ 26 ಕಿಲೋಮೀಟರ್ ವ್ಯಾಪ್ತಿಯ ಮಾರ್ಗವನ್ನು ಮುಂದಿನ ವರ್ಷ (2027) ಜೂನ್ ತಿಂಗಳೊಳಗೆ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವುದಾಗಿ ಮೆಟ್ರೋ ಅಧಿಕಾರಿಗಳು ಸಚಿವರಿಗೆ ಭರವಸೆ ನೀಡಿದ್ದಾರೆ.
PublicNext
20/06/2026 01:43 pm
LOADING...