ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಕ್ರಮ ಸಂಬಂಧಕ್ಕೆ ಅಡ್ಡಿ - ಮದುವೆಯಾದ 4 ತಿಂಗಳಿಗೆ ಮೈದುನನೊಂದಿಗೆ ಸೇರಿ ಪತಿಯನ್ನು ಕೊಂದ ಪತ್ನಿ.!

ಲಕ್ನೋ: ಉತ್ತರ ಪ್ರದೇಶದ ಆಗ್ರಾದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಮದುವೆಯಾದ ಕೇವಲ ನಾಲ್ಕು ತಿಂಗಳಲ್ಲೇ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು, ಪತ್ನಿ ಹಾಗೂ ಆತನ ಸ್ವಂತ ತಮ್ಮ ಸೇರಿಕೊಂಡು ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಗ್ರಾದ ಸುಲ್ತಾನ್‌ಪುರ ಪ್ರದೇಶದಲ್ಲಿ ಹೊಟೇಲ್ ವೇಟರ್ ಆಗಿ ಕೆಲಸ ಮಾಡುತ್ತಿದ್ದ 24 ವರ್ಷದ ಅಮಿತ್ ಕುಮಾರ್ ಅವರ ಶವ ಬುಧವಾರದಂದು ಹೊಲವೊಂದರಲ್ಲಿ ಪತ್ತೆಯಾಗಿತ್ತು. ಸದರ್ ಬಜಾರ್ ಪೊಲೀಸರು ತನಿಖೆ ಕೈಗೆತ್ತಿಕೊಂಡು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಪ್ರಕರಣದ ಅಸಲಿ ಸತ್ಯ ಬಯಲಾಗಿದೆ.

ಮೃತ ಅಮಿತ್ ಕುಮಾರ್ ಪತ್ನಿ ಮತ್ತು ಆತನ 20 ವರ್ಷದ ತಮ್ಮ ಭೋಲಾ ನಡುವೆ ಮದುವೆಗೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಚಾಟಿಂಗ್ ಮಾಡುತ್ತಿದ್ದರು. ಅಷ್ಟೇ ಅಲ್ಲದೆ ಅಕ್ರಮ ಸಂಬಂಧ ಹೊಂದಿದ್ದರು. ಮದುವೆಯಾದ ನಂತರ ಈ ವಿಷಯ ಅಮಿತ್‌ಗೆ ತಿಳಿದುಬಂದಿದ್ದು, ಇದರಿಂದ ಕೆರಳಿದ ಇಬ್ಬರೂ ಸೇರಿ ಅಮಿತ್‌ನನ್ನು ಕೊಲೆ ಮಾಡಲು ಸಂಚು ರೂಪಿಸಿದ್ದರು.

ಡಿಸಿಪಿ ಸೈಯದ್ ಅಲಿ ಅಬ್ಬಾಸ್ ನೀಡಿರುವ ಮಾಹಿತಿ ಪ್ರಕಾರ, ಆರೋಪಿಗಳು ಮೊದಲು ಅಮಿತ್‌ನ ತಲೆಗೆ ಕಲ್ಲಿನಿಂದ ಹೊಡೆದು, ನಂತರ ಟವೆಲ್‌ನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ. ಪೊಲೀಸರ ದಿಕ್ಕು ತಪ್ಪಿಸಲು, ಪತ್ನಿಯು ತಾನು ಆತ್ಮಹತ್ಯೆಗೆ ಯತ್ನಿಸುತ್ತಿರುವುದಾಗಿ ನಾಟಕವಾಡಿದ್ದಳು. ಸದ್ಯ ಪೊಲೀಸರು ಕೊಲೆಗೆ ಬಳಸಿದ ರಕ್ತಸಿಕ್ತ ಕಲ್ಲನ್ನು ವಶಪಡಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಬಿಎನ್‌ಎಸ್ ಸೆಕ್ಷನ್ 103(1) (ಕೊಲೆ), 238 (ಸಾಕ್ಷ್ಯ ನಾಶ) ಹಾಗೂ 61(2) (ಕ್ರಿಮಿನಲ್ ಪಿತೂರಿ) ಅಡಿಯಲ್ಲಿ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಜರುಗಿಸಿದ್ದಾರೆ.

Edited By : Vijay Kumar
PublicNext

PublicNext

20/06/2026 03:47 pm

Cinque Terre

8.32 K

Cinque Terre

0

ಸಂಬಂಧಿತ ಸುದ್ದಿ