ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಾಳಕೊಪ್ಪದಲ್ಲಿ ಪೊಲೀಸ್‌ ಹಾಗೂ ಎಸ್‌ಎಎಫ್‌ ನಿಂದ ರೂಟ್‌ ಮಾರ್ಚ್‌

ಶಿವಮೊಗ್ಗ : ಮುಂಬರುವ ಮೊಹರಂ ಹಬ್ಬದ ಹಿನ್ನೆಲೆ ಶಿರಾಳಕೊಪ್ಪ ಪಟ್ಟಣದಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಪಥ ಸಂಚಲನ ನಡೆಸಲಾಯಿತು.

ಶಿರಾಳಕೊಪ್ಪ ಠಾಣೆ ಪೊಲೀಸರು ವಿಶೇಷ ಕಾರ್ಯಾಚರಣೆ ಪಡೆ ಸಿಬ್ಬಂದಿಯೊಂದಿಗೆ ಜಂಟಿ ಪಥಸಂಚಲನ ನಡೆಸಿದರು. ಪಟ್ಟಣದ ಪ್ರಮುಖ ರಸ್ತೆಗಳು, ಜನನಿಬಿಡ ವೃತ್ತಗಳು ಹಾಗೂ ಆಯಕಟ್ಟಿನ ಪ್ರದೇಶಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಶಾಂತಿ ಮತ್ತು ಸೌಹಾರ್ದತೆಯನ್ನು ಕಾಯ್ದುಕೊಳ್ಳುವ ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಅಧಿಕಾರಿಗಳ ಸೂಚನೆಯ ಮೇರೆಗೆ ರೂಟ್‌ ಮಾರ್ಚ್‌ ನಡೆಯಿತು.

Edited By : PublicNext Desk
Kshetra Samachara

Kshetra Samachara

20/06/2026 03:50 pm

Cinque Terre

100

Cinque Terre

0

ಸಂಬಂಧಿತ ಸುದ್ದಿ