ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಶಿರಸಿ:ಬೆಂಗಳೂರಿನ ನಾಗರಬಾವಿಯಲ್ಲಿ ನೂತನ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿದ:ಸ್ವರ್ಣವಲ್ಲಿ ಶ್ರೀಗಳು

ಶಿರಸಿ: ಶ್ರೀ ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಅಂಗಸಂಸ್ಥೆಯಾದ ಬೆಂಗಳೂರಿನ ಸ್ವರ್ಣರಶ್ಮಿ ಪ್ರತಿಷ್ಠಾನವತಿಯಿಂದ ಸ್ಥಾಪಿಸಲಾಗುತ್ತಿರುವ ಸ್ವರ್ಣರಶ್ಮಿ ಕೌಶಲ್ಯಾಭಿವೃದ್ಧಿ ಮತ್ತು ತರಬೇತಿ ಸಂಸ್ಥೆಯ ನೂತನ ಕಟ್ಟಡದ ಭವ್ಯ ಶಿಲಾನ್ಯಾಸ ಕಾರ್ಯಕ್ರಮ ಬೆಂಗಳೂರಿನ ನಾಗರಭಾವಿ ವರ್ತುಲ ರಸ್ತೆಯ ಎಂ.ಪಿ.ಎಂ. ಬಡಾವಣೆಯಲ್ಲಿರುವ ನಿವೇಶನದಲ್ಲಿ ನೆರವೇರಿತು.

ಮಠಾಧೀಶರಾದ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳವರ ಸಾನ್ನಿಧ್ಯದಲ್ಲಿ ಹಾಗೂ ಅವರ ಅಮೃತ ಹಸ್ತಗಳಿಂದ ಕಟ್ಟಡದ ಶಿಲಾನ್ಯಾಸ ನೆರವೇರಿತು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಯುವಜನರಿಗೆ ಕೌಶಲ್ಯಾಭಿವೃದ್ಧಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ನೀಡುವ ಇಂತಹ ಸಂಸ್ಥೆಗಳು ಸಮಾಜ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಎಂದು ಹೇಳಿದರು.

ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್. ಮುನಿರತ್ನ ಪಾಲ್ಗೊಂಡು, ಸಂಸ್ಥೆಯ ಕಾರ್ಯಚಟುವಟಿಕೆಗಳಿಗೆ ಶುಭಕೋರಿದರು.

ಸಾನ್ನಿಧ್ಯ ನೀಡಿದ ಶ್ರೀಗಳು, ಯುವಜನರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ಉನ್ನತ ಮಟ್ಟದ ತರಬೇತಿ, ಸ್ಪರ್ಧಾತ್ಮಕ ಪರೀಕ್ಷೆಗಳ ಮಾರ್ಗದರ್ಶನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯಾಭಿವೃದ್ಧಿ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ಈ ಸಂಸ್ಥೆ ಕಾರ್ಯನಿರ್ವಹಿಸಲಿದ್ದು, ನೂತನ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸದ ಮೂಲಕ ಅಧಿಕೃತ ಚಾಲನೆ ದೊರೆತಿದೆ ಎಂದರು.

ಈ ಸಂದರ್ಭದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ, ಶಾಸಕ ಎನ್. ಮುನಿರತ್ನ,

ಸ್ವರ್ಣರಶ್ಮಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಸುಬ್ರಾಯ ಎಂ. ಹೆಗಡೆ, ಉಪಾಧ್ಯಕ್ಷ ಎನ್. ರಮೇಶ್, ಹಾಗೂ ಆಡಳಿತ ಮಂಡಳಿಯ ಸದಸ್ಯರು, ಭಕ್ತಾದಿಗಳು ಮತ್ತು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/06/2026 04:07 pm

Cinque Terre

920

Cinque Terre

0

ಸಂಬಂಧಿತ ಸುದ್ದಿ