ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಲತೀರಗಳ ಅಭಿವೃದ್ಧಿಗೆ ಬಿಗ್ ಪ್ಲಾನ್ -ಸಿಎಂ ಡಿಕೆಶಿ ಸಭೆಯಲ್ಲಿ ರಿಷಭ್ ಶೆಟ್ಟಿ ಕೊಟ್ಟ ಸಲಹೆಗಳೇನು?

ಬೆಂಗಳೂರು : ಕರಾವಳಿ ಭಾಗದ ಪ್ರವಾಸೋದ್ಯಮಕ್ಕೆ ಜಾಗತಿಕ ಮಟ್ಟದ ಸ್ಪರ್ಶ ನೀಡಲು ಸರ್ಕಾರ ಈಗ ಹೊಸ ಮಾಸ್ಟರ್ ಪ್ಲಾನ್ ಸಿದ್ಧಪಡಿಸುತ್ತಿದೆ. ಹೌದು, ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಇಂದು ಅತ್ಯಂತ ಮಹತ್ವದ ಉನ್ನತ ಮಟ್ಟದ ಸಭೆ ಆರಂಭಗೊಂಡಿದೆ. ಕರಾವಳಿಯ ಸುಂದರ ಕಡಲತೀರಗಳು, ಸಾಂಸ್ಕೃತಿಕ ವೈಭವ ಹಾಗೂ ಧಾರ್ಮಿಕ ಪ್ರವಾಸಿ ತಾಣಗಳನ್ನು ಜಾಗತಿಕ ಭೂಪಟದಲ್ಲಿ ಮುಂಚೂಣಿಗೆ ತರುವ ನಿಟ್ಟಿನಲ್ಲಿ ಈ ಸಭೆಯಲ್ಲಿ ಗಂಭೀರ ಚರ್ಚೆಗಳು ನಡೆಯುತ್ತಿವೆ.

ಇನ್ನು ಈ ಸಭೆಯ ಮತ್ತೊಂದು ವಿಶೇಷ ಆಕರ್ಷಣೆ ಎಂದರೆ, ಕರಾವಳಿಯ ದೈವಿಕ ಸಂಸ್ಕೃತಿ ಮತ್ತು ಸೊಗಡನ್ನು ಜಗತ್ತಿಗೆ ಪರಿಚಯಿಸಿದ 'ಕಾಂತಾರ' ಖ್ಯಾತಿಯ ನಟ, ನಿರ್ದೇಶಕ ರಿಷಭ್ ಶೆಟ್ಟಿ ಅವರು ಕೂಡ ಭಾಗವಹಿಸಿದ್ದಾರೆ. ಸ್ಥಳೀಯ ಪ್ರವಾಸೋದ್ಯಮದ ಸವಾಲುಗಳು, ಹೋಂ ಸ್ಟೇಗಳ ಅಭಿವೃದ್ಧಿ ಹಾಗೂ ಪರಿಸರಸ್ನೇಹಿ ಪ್ರವಾಸೋದ್ಯಮಕ್ಕೆ ನೀಡಬೇಕಾದ ಉತ್ತೇಜನದ ಬಗ್ಗೆ ರಿಷಭ್ ಶೆಟ್ಟಿ ಅವರು ಸರ್ಕಾರಕ್ಕೆ ಪ್ರಮುಖ ಸಲಹೆಗಳನ್ನು ನೀಡುತ್ತಿದ್ದಾರೆ.

ಈ ಪ್ರಭಾವಿ ಸಭೆಯಲ್ಲಿ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್, ಪ್ರವಾಸೋದ್ಯಮ ನಿಗಮದ ಅಧ್ಯಕ್ಷರು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದಾರೆ. ಮೂಲಸೌಕರ್ಯಗಳ ಅಭಿವೃದ್ಧಿ ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸುವ ನಿಟ್ಟಿನಲ್ಲಿ ದೊಡ್ಡ ಯೋಜನೆಗಳು ರೂಪಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಕರಾವಳಿ ಪ್ರವಾಸೋದ್ಯಮ ಕ್ಷೇತ್ರ ಸಂಪೂರ್ಣ ಹೊಸ ರೂಪ ಪಡೆಯುವ ಮುನ್ಸೂಚನೆ ಸಿಕ್ಕಿದೆ.

Edited By : Manjunath H D
PublicNext

PublicNext

20/06/2026 04:14 pm

Cinque Terre

4.05 K

Cinque Terre

0

ಸಂಬಂಧಿತ ಸುದ್ದಿ