ಧಾರವಾಡ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳನ್ನು ಖಂಡಿಸಿ ಧಾರವಾಡ ವಿವೇಕಾನಂದ ವೃತ್ತದಲ್ಲಿ ಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ವಿದ್ಯಾರ್ಥಿ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡಿರುವ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣವೇ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ವಿನಯಚಂದ್ರ, ಧಾರವಾಡ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, ಜಿಲ್ಲಾ ಅಧ್ಯಕ್ಷೆ ಸಿಂಧೂ ಕೌದಿ, ಮುಖಂಡರಾದ ಸಿದ್ದು, ಶಾಂತೇಶ್, ರವಿ ಸೇರಿದಂತೆ ಇತರರಿದ್ದರು.
Kshetra Samachara
20/06/2026 04:24 pm
LOADING...