ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಳಕಾಲ್ಮೂರು: ಅಕ್ರಮ ಅನ್ನಭಾಗ್ಯ ಅಕ್ಕಿ ಸಾಗಾಟ ಜಾಲ ಪತ್ತೆ

ಮೊಳಕಾಲ್ಮೂರು: ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಸಾಗಾಟ ಮಾಡುತ್ತಿದ್ದ ಜಾಲವೊಂದನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಬಳಿಯ ಸ್ವಾಮಿಕೆರೆ ಸಮೀಪ ಆಹಾರ ಇಲಾಖೆ ಹಾಗೂ ರಾಂಪುರ ಪೊಲೀಸರು ಜಂಟಿಯಾಗಿ ದಾಳಿ ನಡೆಸಿ 70 ಚೀಲಗಳ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ಅನ್ನಭಾಗ್ಯ ಯೋಜನೆಯಡಿ ಸಾರ್ವಜನಿಕರಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಬೇರೆಡೆ ಸಾಗಾಟ ಮಾಡಲು ಸಿದ್ಧತೆ ನಡೆಸಲಾಗುತ್ತಿತ್ತು ಎಂಬ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದರು. ಮೊಳಕಾಲ್ಮೂರು ತಾಲೂಕಿನ ತಮ್ಮೇನಹಳ್ಳಿ ಬಳಿಯ ಸ್ವಾಮಿಕೆರೆ ಸಮೀಪ ಅಕ್ಕಿಯನ್ನು ವಾಹನಕ್ಕೆ ಲೋಡ್ ಮಾಡುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಜಾಲವನ್ನು ಭೇದಿಸಿದ್ದಾರೆ.

ಕಾರ್ಯಾಚರಣೆಯಲ್ಲಿ ಒಟ್ಟು 70 ಚೀಲಗಳ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದ್ದು, ಸುಮಾರು 4,300 ಕೆ.ಜಿ. ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಲಾಗಿದೆ. ಆಹಾರ ಇಲಾಖೆ ಶಿರಸ್ತೇದಾರ ಗೀತಾಂಜನೇಯ ನೇತೃತ್ವದಲ್ಲಿ ರಾಂಪುರ ಪೊಲೀಸರ ಸಹಯೋಗದೊಂದಿಗೆ ಈ ದಾಳಿ ಯಶಸ್ವಿಯಾಗಿ ನಡೆಸಲಾಗಿದೆ.

ಈ ಬಗ್ಗೆ ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Manjunath H D
PublicNext

PublicNext

20/06/2026 07:15 pm

Cinque Terre

6.55 K

Cinque Terre

0

ಸಂಬಂಧಿತ ಸುದ್ದಿ