ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ ಕೃಷಿ ವಿವಿಯಲ್ಲಿ 23 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆಯ ನೇರ ಪ್ರಸಾರ

ಧಾರವಾಡ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ 23 ನೇ ಕಂತಿನ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆಯ ನೇರ ಪ್ರಸಾರ ಕಾರ್ಯಕ್ರಮವನ್ನು ಧಾರವಾಡ ಕೃಷಿ ವಿಶ್ವವಿದ್ಯಾಲಯ ರೈತರ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಲಾಗಿತ್ತು.

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ರೈತರಿಗೆ ಅನುಕೂಲ ಆಗಲಿ ಎಂದು ದೂರ ದೃಷ್ಟಿಯಿಂದ ಕೇಂದ್ರ ಸರ್ಕಾರವು ರೈತರಿಗೆ ಗೌರವ ಧನ ನೀಡುತ್ತಿದೆ. ದೇಶದಲ್ಲಿ ರೈತರಿಗೆ ಲಾಭ ಸಿಗಬೇಕು ಎಂದು ಕೇಂದ್ರ ಸರ್ಕಾರ ಯೋಜನೆ ಜಾರಿಗೆ ತಂದಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಎಂ.ಆರ್ ಪಾಟೀಲ್, ಮಹಾಪೌರ ಜ್ಯೋತಿ ಪಾಟೀಲ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ, ಮಾಜಿ ಶಾಸಕಿ ಸೀಮಾ ಮಸೂತಿ, ಕೃಷಿ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಕೃಷ್ಣರಾಜ, ವಿಸ್ತರಣಾ ನಿರ್ದೇಶಕ ಡಾ.ಎಂ.ಬಿ ಮಂಜುನಾಥ, ಮುಖಂಡರಾದ ಶಂಕರ ಮುಗದ, ಶಿವಾನಂದ ಕವಳಿ, ಸಂಜಯ ಕಪಟಕರ್, ಸವಿತಾ ಅಮರಶೆಟ್ಟಿ, ಎಂ.ಜೆ ಚಂದ್ರೇಗೌಡ, ರವಿ ಮಾಳಗೇರ, ಬಸವರಾಜ ಕುಂದಗೋಳಮಠ ಸೇರಿದಂತೆ ಇತರರಿದ್ದರು.

Edited By : Manjunath H D
Kshetra Samachara

Kshetra Samachara

20/06/2026 07:18 pm

Cinque Terre

1.36 K

Cinque Terre

0

ಸಂಬಂಧಿತ ಸುದ್ದಿ