ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಅಡ್ಡ ಮತದಾನದಿಂದ ಬೊಮ್ಮಾಯಿ ತೀವ್ರ ಬೇಸರ - 'ಆಘಾತಕಾರಿ, ದುರ್ದೈವದ ಸಂಗತಿ'

ಹಾವೇರಿ: ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಅಡ್ಡ ಮತದಾನದ ಬಗ್ಗೆ ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ್ ಬೊಮ್ಮಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. "ಇದು ನಮಗೆ ಅತ್ಯಂತ ಆಘಾತಕಾರಿ ಹಾಗೂ ದುರ್ದೈವದ ಸಂಗತಿ, ಇಂತಹ ಘಟನೆ ನಡೆಯಬಾರದಿತ್ತು" ಎಂದು ಅವರು ವಿಷಾದ ವ್ಯಕ್ತಪಡಿಸಿದರು.

ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಅಡ್ಡ ಮತದಾನದ ಕುರಿತು ಸಮಗ್ರ ತನಿಖೆ ನಡೆಸಿ, ಅದರ ವರದಿಯನ್ನು ಹೈಕಮಾಂಡ್‌ಗೆ ಸಲ್ಲಿಸುವುದಾಗಿ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಾಧ್ಯಕ್ಷರು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ನೀಟ್ ಪರೀಕ್ಷಾ ಅಕ್ರಮದ ಕುರಿತೂ ಪ್ರತಿಕ್ರಿಯಿಸಿದ ಬಸವರಾಜ್ ಬೊಮ್ಮಾಯಿ, ಯುಪಿಎ ಸರ್ಕಾರವಿದ್ದಾಗ ರಾಜ್ಯಮಟ್ಟದಲ್ಲಿ ಹಲವು ಪರೀಕ್ಷೆಗಳು ನಡೆಯುತ್ತಿದ್ದವು. ಆ ಅವಧಿಯಲ್ಲಿ ಎಷ್ಟು ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆಗಳು ಸೋರಿಕೆಯಾಗಿಲ್ಲ ಎಂದು ಪ್ರಶ್ನಿಸಿದರು. ನೀಟ್ ಪ್ರಶ್ನೆಪತ್ರಿಕೆ ಬಹಿರಂಗ ವಿಷಯದಲ್ಲಿ ರಾಜಕೀಯ ಬೆರೆಸುವುದು ಸರಿಯಲ್ಲ ಎಂದೂ ಅವರು ಅಭಿಪ್ರಾಯಪಟ್ಟರು.

Edited By : Manjunath H D
PublicNext

PublicNext

20/06/2026 08:12 pm

Cinque Terre

15.17 K

Cinque Terre

0

ಸಂಬಂಧಿತ ಸುದ್ದಿ