ಹುಬ್ಬಳ್ಳಿ: ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ವಿಚಾರ, ಅದು ದುರ್ದೈವದ ಸಂಗತಿ. ಇದನ್ನು ಕೇಂದ್ರೀಯ ಸಮಿತಿ ಗಂಭೀರವಾಗಿ ಪರಿಗಣಿಸಿದೆ. ಈ ಬಗ್ಗೆ ಕಮಿಟಿ ರಚನೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಅಡ್ಡ ಮತದಾನ ಮಾಡಿದವರು ದುಡ್ಡಿನ ಆಸೆಗಾಗಿ ಮಾಡಿದ್ದಾರೆ. ನಾವು ಮಾಡಿದ್ದು ಯಾರಿಗೂ ಗೊತ್ತಾಗಲ್ಲ ಅಂತ ಅವರು ಅಂದುಕೊಂಡಿದ್ದಾರೆ.ಆದರೆ ಕೆಲವೇ ದಿನಗಳಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದರು.
ಪಾರ್ಟಿ ಪರವಾಗಿ ಗೆದ್ದ ಮೇಲೆ ಪಾರ್ಟಿ ಪರವಾಗಿ ಮತ ಹಾಕಬೇಕು. ಅವರ ವಿಶ್ವಾಸವನ್ನು ತೆಗೆದುಕೊಳ್ಳಬೇಕು ಅಂತಿಲ್ಲ. ವಿಜಯೇಂದ್ರ, ಅಶೋಕ್ ದೆಹಲಿಗೆ ಬರೋದಾಗಿ ಹೇಳಿದ್ದಾರೆ. ರಾಷ್ಟ್ರೀಯ ನಾಯಕತ್ವ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ಹೇಳಿದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
20/06/2026 08:19 pm
LOADING...