ಖಾನಾಪುರ: ಮಹಾರಾಷ್ಟ್ರ ಏಕೀಕರಣ ಸಮಿತಿ ವತಿಯಿಂದ ಬೆಳಗಾವಿಯಲ್ಲಿ ಆಯೋಜಿಸಲಾಗಿರುವ ಕಡ್ಡಾಯ ಕನ್ನಡ ವಿರೋಧಿ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಇಂದು ಖಾನಾಪುರ ತಹಶೀಲ್ದಾರ ಕಚೇರಿಗೆ ಮನವಿ ಸಲ್ಲಿಸಿದರು.
ಕರ್ನಾಟಕದ ಅಧಿಕೃತ ಭಾಷೆಯಾದ ಕನ್ನಡದ ವಿರುದ್ಧ ನಡೆಯುವ ಯಾವುದೇ ಪ್ರತಿಭಟನೆ ರಾಜ್ಯದ ಭಾಷಾ ಹಾಗೂ ಸಾಂಸ್ಕೃತಿಕ ಅಸ್ಮಿತೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ, ಇಂತಹ ಕಾರ್ಯಕ್ರಮಗಳಿಗೆ ಆಡಳಿತವು ಅನುಮತಿ ನೀಡಬಾರದು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಅಧ್ಯಕ್ಷ ವಿಠ್ಠಲ ಹಿಂಡಲಕರ, ತಾಲೂಕು ಸಹ ಕಾರ್ಯದರ್ಶಿ ಬಿಷ್ಟಪ್ಪ ಬನೋಶಿ, ತಾಲೂಕು ಸಂಚಾಲಕ ಶ್ರೀಕಾಂತ ಪಾಟೀಲ, ತಮ್ಮಣ್ಣ ಗವನಾಳಿ, ರಾಮಚಂದ್ರ ಪಾಟೀಲ, ಸಿದ್ದು ಕೋಲಕಾರ, ಮಡಿವಾಳ ಭೂಪನ್ನಿ, ರಾಮಲಿಂಗ ಪಾಟೀಲ, ಭೀಮಸೇನ ಅಗಸರ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು
ಮನವಿ ಸ್ವೀಕರಿಸಿದ ಅಧಿಕಾರಿಗಳು ಸಂಬಂಧಿತ ವಿಷಯವನ್ನು ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು ಈ ವೇಳೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಭಾಷೆಯ ಗೌರವ ಮತ್ತು ರಕ್ಷಣೆಗೆ ಬದ್ಧರಾಗಿರುವುದಾಗಿ ತಿಳಿಸಿದರು.
ನಾಗೇಶ್ ನಾಯ್ಕರ್ ಪಬ್ಲಿಕ್ ನೆಕ್ಸ್ಟ್ ಖಾನಾಪುರ
PublicNext
20/06/2026 08:26 pm
LOADING...