ಹಾವೇರಿ: ಬಿಡದಿಯ ಟೌನ್ ಶಿಪ್ ಯೋಜನೆ ಕೈಬಿಡುವಂತೆ ಆಗ್ರಹಿಸಿ ಹಾವೇರಿಯಲ್ಲಿ ಕರವೇ ಪ್ರವೀಣ್ ಶೆಟ್ಟಿ ಬಣ ಪ್ರತಿಭಟನೆ ನಡೆಸಿತು.
ಹಾವೇರಿಯ ಕಾಗಿನೆಲೆಯ ವೃತ್ತದಲ್ಲಿ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರೈತರ ಫಲವತ್ತಾದ ಭೂಮಿಯಲ್ಲಿ ಟೌನ್ ಶಿಪ್ ಮಾಡಲು ಸರ್ಕಾರ ಹೊರಟಿದೆ. ನೂರಾರು ರೈತರು ಭೂಮಿಯನ್ನು ಕಳೆದುಕೊಂಡರೆ ಬೀದಿಗೆ ಬರುತ್ತಾರೆ. ಕೂಡಲೇ ಸರ್ಕಾರ ಬಿಡದಿ ಟೌನ್ ಶಿಪ್ ನಿರ್ಮಾಣ ನಿಲ್ಲಿಸಬೇಕು.
ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಕರವೇ ಕಾರ್ಯಕರ್ತರು ಎಚ್ಚರಿಕೆ ನೀಡಿದರು.
PublicNext
20/06/2026 08:36 pm
LOADING...