ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡೂರು: ನಂಬರ್ ಪ್ಲೇಟ್ ಇಲ್ಲದ ಬೈಕ್ ಡಿಕ್ಕಿ - ವೃದ್ಧನಿಗೆ ತೀವ್ರ ರಕ್ತಸ್ರಾವ, ಸವಾರನ ವಿರುದ್ಧ ಕೇಸ್

ಕಡೂರು: ಚಂದ್ರಮೌಳೇಶ್ವರ ದೇವಸ್ಥಾನದ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ವೃದ್ಧರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ತೀವ್ರವಾಗಿ ಗಾಯಗೊಳಿಸಿದ ಘಟನೆ ಜೂ15 ಸೋಮವಾರ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

ದೊಡ್ಡಪೇಟೆಯ ಪುಟ್ಟಪ್ಪ (65) ಎಂಬುವವರು ರಸ್ತೆಯ ಎಡಬದಿಯಲ್ಲಿ ನಿಂತಿದ್ದಾಗ, ಬೀರೂರು ಕಡೆಯಿಂದ ಬಂದ ನಂಬರ್ ಪ್ಲೇಟ್ ಇಲ್ಲದ ಕಪ್ಪು ಬಣ್ಣದ ಹೀರೊ ಸ್ಪ್ಲೆಂಡರ್ ಪ್ಲಸ್ ಬೈಕ್ ಸವಾರ ಲಿಖಿತ್ (ವಾಸ: ಕಲ್ಕೇರೆ ಗ್ರಾಮ, ಅಜ್ಜಂಪುರ) ಅತಿವೇಗ ಹಾಗೂ ಅಜಾಗರೂಕತೆಯಿಂದ ಬಂದು ಹಿಂಬದಿಯಿಂದ ಡಿಕ್ಕಿ ಹೊಡೆಸಿದ್ದಾನೆ. ಅಪಘಾತದಿಂದ ಪುಟ್ಟಪ್ಪ ಅವರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು, ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವವಾಗಿದೆ ಮತ್ತು ಎರಡು ಕಾಲುಗಳಿಗೂ ಗಾಯಗಳಾಗಿವೆ. ತಕ್ಷಣ ಅವರನ್ನು ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಲಾಗಿದೆ. ಗಾಯಾಳುವಿನ ಮಗ ರಂಗನಾಥ್ ನೀಡಿದ ದೂರಿನನ್ವಯ ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Edited By : PublicNext Desk
PublicNext

PublicNext

20/06/2026 08:51 pm

Cinque Terre

2.04 K

Cinque Terre

0

ಸಂಬಂಧಿತ ಸುದ್ದಿ