ಬೆಂಗಳೂರು: ಬೆಂಗಳೂರು ಉತ್ತರ ನಗರ ಪಾಲಿಕೆ (BNCC) ವ್ಯಾಪ್ತಿಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ, ಅವುಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಶುಕ್ರವಾರ ಆಯೋಜಿಸಲಾದ ಫೋನ್-ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಸ್ವೀಕರಿಸಿದ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೋಮ್ಮಲ ಸುನೀಲ್ ಕುಮಾರ್ ಅವರು, ಸಾರ್ವಜನಿಕರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಶೀಲಿಸಿ ತ್ವರಿತವಾಗಿ ಪರಿಹರಿಸುವಂತೆ ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇಂದಿನ ಫೋನ್-ಇನ್ ಕಾರ್ಯಕ್ರಮದಲ್ಲಿ 47 ಕರೆಗಳು ಸ್ವೀಕರಿಸಲ್ಪಟ್ಟು, ಒಟ್ಟು 67 ಅಹವಾಲುಗಳು ದಾಖಲಾಗಿವೆ.
ರಸ್ತೆ ನಿರ್ವಹಣೆ ಹಾಗೂ ಘನ ತ್ಯಾಜ್ಯ ನಿರ್ವಹಣೆಗೆ ಸಂಬಂಧಿಸಿದ ಅಹವಾಲುಗಳು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಾಗಿರುವ ಹಿನ್ನೆಲೆಯಲ್ಲಿ, ಸಂಬಂಧಿತ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಂಡು ಸಾರ್ವಜನಿಕರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸುವಂತೆ ಆಯುಕ್ತರು ಸೂಚಿಸಿದರು.
PublicNext
20/06/2026 10:08 pm
LOADING...