ಬೆಂಗಳೂರು: ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವತಿಯಿಂದ ಇಂದು ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರ ನೀಡುವ ಉದ್ದೇಶದಿಂದ ಫೋನ್-ಇನ್ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು.
ದಕ್ಷಿಣ ನಗರ ಪಾಲಿಕೆಯ ಅಪರ ಆಯುಕ್ತರಾದ ಎಂ.ರಾಚಪ್ಪ ರವರು ಇಂದು ಸಂಜೆ 4ರಿಂದ 5 ಗಂಟೆಯ ಅವಧಿಯವರೆಗೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತಂತೆ 10ಕ್ಕೂ ಹೆಚ್ಚು ಕರೆಗಳನ್ನು ಸ್ವೀಕರಿಸಿ ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದರು.
ಬಾಪೂಜಿನಗರ, ಮೂಡಲಪಾಳ್ಯ ಸೇರಿದಂತೆ ವಿವಿಧ ಪ್ರದೇಶಗಳ ಅನೇಕ ನಾಗರಿಕರು ದೂರವಾಣಿ ಕರೆಗಳ ಮೂಲಕ ಮತದಾರರ ಪಟ್ಟಿಯ ಗೊಂದಲಗಳ ಕುರಿತು ಅಪರ ಆಯುಕ್ತರನ್ನು ಪ್ರಶ್ನಿಸಿದರು.
ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿದ ಡಾ. ರಾಚಪ್ಪ ರವರು, ಮತದಾರರ ಪಟ್ಟಿಯ ಪರಿಷ್ಕರಣೆಗಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಓ) ಕಡ್ಡಾಯವಾಗಿ ಪ್ರತಿಯೊಬ್ಬರ ಮನೆ-ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಅರ್ಹ ಹೊಸ ಮತದಾರರನ್ನು ಪಟ್ಟಿಗೆ ಸೇರಿಸುವುದು, ದ್ವಿಪ್ರತಿ, ವರ್ಗಾವಣೆಗೊಂಡಿರುವ, ಮರಣ ಹೊಂದಿರುವ ಹಾಗೂ ಅನರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲು ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಟ್ಟರು.
ಈ ವೇಳೆ ಸಹಾಯಕ ಆಯುಕ್ತ ಶ್ರೀನಿವಾಸ್ ಮೂರ್ತಿ ಚುನಾವಣಾ ವಿಭಾಗದ ತಹಶೀಲ್ದಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
PublicNext
20/06/2026 11:11 pm
LOADING...