ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ನಗರದ ಡಾ. ಪುನೀತ್ ರಾಜ್‌ಕುಮಾರ್ ವೃತ್ತದಲ್ಲಿ ಶ್ರೀ ಶಿವಶರಣ ಮಾದರ ಚೆನ್ನಯ್ಯ ಸೇವಾ ಸಮಿತಿ, ವಿಜಯನಗರ ಜಿಲ್ಲೆ ವತಿಯಿಂದ ಶ್ರೀ ಡಾ. ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿಗಳ ಹುಟ್ಟುಹಬ್ಬದ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಮಾತಂಗ ಗುರುಪೀಠ ಹಂಪಿಯ ಶ್ರೀ ಪೂರ್ಣಾನಂದ ಭಾರತಿ ಸ್ವಾಮೀಜಿಯವರ ದಿವ್ಯ ಸಾನ್ನಿಧ್ಯದಲ್ಲಿ ಮತ್ತು ಜಿಲ್ಲಾಧ್ಯಕ್ಷರಾದ ಹೆಚ್. ಶ್ರೀನಿವಾಸ ಅವರ ನೇತೃತ್ವದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕೇಂದ್ರ ಮಾಜಿ ಸಚಿವರಾದ ಎ. ನಾರಾಯಣಸ್ವಾಮಿ ಅವರು ಮಾತನಾಡಿ, ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಶ್ರೀ ಮಾದರ ಚೆನ್ನಯ್ಯ ಸ್ವಾಮೀಜಿಗಳ ಹುಟ್ಟುಹಬ್ಬವನ್ನು ಅನೇಕ ಕಾರ್ಯಕರ್ತರು ಆಚರಿಸುತ್ತಿದ್ದಾರೆ. ವಿಶೇಷವಾಗಿ ವಿಜಯನಗರ ಜಿಲ್ಲೆಯಲ್ಲಿ ಅನ್ನಸಂತರ್ಪಣೆ ಮಾಡುವುದರ ಮೂಲಕ ಅರ್ಥಪೂರ್ಣವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸ್ವಾಮೀಜಿಯವರಿಗೆ ದೇವರು ಆರೋಗ್ಯ, ಆಯಸ್ಸು, ಸಮಾಜವನ್ನು ಮುನ್ನಡೆಸುವ ಶಕ್ತಿ ದಯಪಾಲಿಸಲಿ ಮತ್ತು ವಿಜಯನಗರ ಜಿಲ್ಲೆ ಮಾದರ ಚೆನ್ನಯ್ಯ ಸೇವಾ ಸಮಿತಿ ಬಲಿಷ್ಠಗೊಳ್ಳಲಿ ಎಂದು ಹೇಳಿದರು.
Kshetra Samachara
19/07/2026 10:50 pm
LOADING...