ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೊಸಪೇಟೆ: ಎನ್‌ಹೆಚ್ 50 ಟನಲ್ ಬಳಿ ವಿಂಡ್ ಫ್ಯಾನ್ ರೆಕ್ಕೆ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿ; ಭಾರೀ ಟ್ರಾಫಿಕ್ ಜಾಮ್!

ಹೊಸಪೇಟೆ: ರಾಷ್ಟ್ರೀಯ ಹೆದ್ದಾರಿ 50ರ ಹೊಸಪೇಟೆ ಹೊರವಲಯದ ಟನಲ್ ಬಳಿ, ಪವನ ವಿದ್ಯುತ್ ಘಟಕದ (ವಿಂಡ್ ಫ್ಯಾನ್) ಬೃಹತ್ ರೆಕ್ಕೆಯನ್ನು ಹೊತ್ತು ಸಾಗುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯ ತೀವ್ರತೆಗೆ ಹೆದ್ದಾರಿಯುದ್ದಕ್ಕೂ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

​ಲಾರಿ ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ, ಹೊಸಪೇಟೆಯಿಂದ ಬೆಂಗಳೂರು ಕಡೆಗೆ ಸಂಚರಿಸಬೇಕಿದ್ದ ನೂರಾರು ವಾಹನಗಳು ಮುಂದಕ್ಕೆ ಚಲಿಸಲಾಗದೆ ತಾಸುಗಟ್ಟಲೆ ನಿಂತಲ್ಲೇ ನಿಲ್ಲುವಂತಾಯಿತು. ಇದರಿಂದಾಗಿ ವಾಹನ ಸವಾರರು ತೀವ್ರ ಪರದಾಟ ನಡೆಸಿದರು.

​ವಿಷಯ ತಿಳಿಯುತ್ತಿದ್ದಂತೆ ಮರಿಯಮ್ಮನಹಳ್ಳಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಜೆಸಿಬಿ ಹಾಗೂ ಕ್ರೇನ್ ಮೂಲಕ ಲಾರಿಯನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲು ಸತತ ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನು ಪಲ್ಟಿಯಾದ ಲಾರಿ ಯಾವ ಕಂಪನಿಗೆ ಸೇರಿದ ವಿಂಡ್ ಫ್ಯಾನ್ ರೆಕ್ಕೆಯನ್ನು ಸಾಗಿಸುತ್ತಿತ್ತು ಎಂಬ ಬಗ್ಗೆ ಸದ್ಯಕ್ಕೆ ನಿಖರ ಮಾಹಿತಿ ಲಭ್ಯವಾಗಿಲ್ಲ.

Edited By :
PublicNext

PublicNext

20/07/2026 07:41 am

Cinque Terre

6.85 K

Cinque Terre

0