ಚಾಮರಾಜನಗರ: ಅನುಮಾನಾಸ್ಪದವಾಗಿ ಗಂಡು ಚಿರತೆಯೊಂದು ಮೃತಪಟ್ಟಿರುವ ಘಟನೆ ಹನೂರು ತಾಲೂಕಿನ ಹುಲ್ಲೇಪುರ ಗ್ರಾಮದಲ್ಲಿ ನಡೆದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸಾವಿನ ಕುರಿತು ತನಿಖೆ ಆರಂಭಿಸಿದ್ದಾರೆ.
ಗ್ರಾಮದ ಜಮೀನೊಂದರಲ್ಲಿ ಚಿರತೆ ಇರುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ದೊರಕಿದೆ. ಕೂಡಲೇ ಹನೂರು ಬಫರ್ ವಲಯದ ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದಾಗ ಗಂಡು ಚಿರತೆಯೊಂದು ನಿತ್ರಾಣವಾಗಿ ಮಲಗಿರುವು
ದನ್ನು ಗಮನಿಸಿ, ಕೂಡಲೇ ಚಿರತೆಯನ್ನು ಸೆರೆ ಹಿಡಿದು ಅಜ್ಜಿಪುರ ಬಳಿಯ ಸಸ್ಯಕ್ಷೇತದಲ್ಲಿ ಚಿಕಿತ್ಸೆ ಕೊಡಿಸಲು ತೆರಳಿದ್ದಾರೆ. ಆದರೆ, ಮಾರ್ಗ ಮಧ್ಯೆಯೇ ಚಿರತೆ ಮೃತಪಟ್ಟಿದೆ. ಚಿರತೆ ಸಾವಿಗೆ ಅನುಮಾನ ವ್ಯಕ್ತಪಡಿಸಿರುವ ಅಧಿಕಾರಿಗಳು ಚಿರತೆ ನಿತ್ರಾಣಗೊಂಡಿದ್ದ ಸ್ಥಳದಲ್ಲಿ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಶ್ವಾನದಳದಿಂದ ಕೂಂಬಿಂಗ್ ನಡೆಸಲಾಗುತ್ತಿದೆ. ಜೊತೆಗೆ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಚಿರತೆಯ ಅಂಗಾಂಗ ಮಾದರಿಯನ್ನು ಸಂಗ್ರಹಿಸಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
PublicNext
21/07/2026 10:00 am
LOADING...