ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಬಳ್ಳಾಪುರ: ಬೆಂಕಿ ಕೆನ್ನಾಲಿಗೆಗೆ ತಡರಾತ್ರಿ ಸುಟ್ಟು ಭಸ್ಮವಾಯ್ತು 3 ಅಂಗಡಿಗಳು!- ಚಿಂತಾಮಣಿಯಲ್ಲಿ ದಿಗಿಲು ಮೂಡಿಸಿದ ದೃಶ್ಯ!

ಚಿಂತಾಮಣಿ : ತಾಲ್ಲೂಕಿನ ಕೆಂಚಾರ್ಲಹಳ್ಳಿ ಗ್ರಾಮದಲ್ಲಿ ತಡರಾತ್ರಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗ್ರಾಮದ ಶಿರೀಶ್, ಶಶಿಕುಮಾರ್ ಮತ್ತು ಸುರೇಶ್ ಎಂಬುವವರಿಗೆ ಸೇರಿದ ಮೊಬೈಲ್ ಅಂಗಡಿ,ಟೀ ಅಂಗಡಿ ಹಾಗೂ ಎಲೆಕ್ಟ್ರಾನಿಕ್ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.

ಬೆಂಕಿಯ ಕೆನ್ನಾಲಿಗೆಗೆ ಅಂಗಡಿಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಕರಕಲಾಗಿದ್ದು,ಮಾಲೀಕರಿಗೆ ಭಾರಿ ನಷ್ಟ ಸಂಭವಿಸಿದೆ ಎನ್ನಲಾಗಿದೆ.ಘಟನಾ ಸ್ಥಳದಲ್ಲಿ ಸಾರ್ವಜನಿಕರ ಆತಂಕ ಮೂಡಿಸಿತ್ತು.

ಅಗ್ನಿಶಾಮಕ ಸಿಬ್ಬಂದಿ ಕಾರ್ಯಕ್ಷಮತೆ

ವಿಷಯ ತಿಳಿಯುತ್ತಿದ್ದಂತೆ ಕೆಂಚಾರ್ಲಹಳ್ಳಿ ಗ್ರಾಮಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ,ತಕ್ಷಣವೇ ಕಾರ್ಯಾಚರಣೆ ಕೈಗೊಂಡು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಪಕ್ಕದ ಕಟ್ಟಡಗಳಿಗೆ ಹಾಗೂ ಅಂಗಡಿಗಳಿಗೆ ಬೆಂಕಿ ವ್ಯಾಪಿಸುವುದು ತಪ್ಪಿದಂತಾಗಿದೆ.ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಕ್ಕತೇಕಹಳ್ಳಿ ಡಿ ಶಿವಕುಮಾರ್ ಪಬ್ಲಿಕ್ ನೆಕ್ಸ್ಟ್ ಚಿಕ್ಕಬಳ್ಳಾಪುರ

Edited By :
PublicNext

PublicNext

21/07/2026 03:10 pm

Cinque Terre

9.36 K

Cinque Terre

0

ಸಂಬಂಧಿತ ಸುದ್ದಿ