ಚಿತ್ರದುರ್ಗ: ರಸ್ತೆ ಪಕ್ಕ ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜರುಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಟಿ.ನುಲೇನೂರು ಗೇಟ್ ಬಳಿ ನಡೆದಿದೆ.
ದಗ್ಗೆ ಗ್ರಾಮದ 38 ವರ್ಷದ ಪ್ರದೀಪ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಹೊಳಲ್ಕೆರೆ ಕಡೆಯಿಂದ ಚಿತ್ರದುರ್ಗ ಕಡೆ ಬರ್ತಿದ್ದ ಕಾರು, ರಸ್ತೆಯಲ್ಲಿ ಅಡ್ಡ ಬಂದ ನಾಯಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಚಿತ್ರಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
PublicNext
22/07/2026 02:47 pm
LOADING...