ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾಸನ: ಪುರದಮ್ಮ ದೇವಾಲಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ವೇಗ - ಶೌಚಾಲಯಗಳ ಸ್ವಚ್ಛತೆಗೆ ಹೀರುವ ಯಂತ್ರ ಬಳಕೆ

ಹಾಸನ: ಇತಿಹಾಸ ಪ್ರಸಿದ್ಧ ಶ್ರೀ ಚೌಡೇಶ್ವರಿ (ಪುರದಮ್ಮ) ದೇವಾಲಯ, ಬೀಕನಹಳ್ಳಿಯಲ್ಲಿ ಭಕ್ತರಿಗೆ ಸ್ವಚ್ಛ, ಸುಸಜ್ಜಿತ ಹಾಗೂ ಆರೋಗ್ಯಕರ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಂತ ಹಂತವಾಗಿ ಆರಂಭಗೊಂಡಿದ್ದು, ಅದರ ಭಾಗವಾಗಿ ದೇವಾಲಯದ ಆವರಣದಲ್ಲಿರುವ ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಆಧುನಿಕ ಹೀರುವ ಯಂತ್ರ (Suction Machine) ಮೂಲಕ ಕೈಗೊಳ್ಳಲಾಯಿತು.

ಕೆಲವು ತಿಂಗಳ ಹಿಂದೆ ದೇವಾಲಯದ ಅಭಿವೃದ್ಧಿಗೆ ಸಂಬಂಧಿಸಿದಂತೆ ಪಾರದರ್ಶಕ ಆಡಳಿತ, ಮೂಲಭೂತ ಸೌಲಭ್ಯಗಳ ವಿಸ್ತರಣೆ ಹಾಗೂ ಸ್ವಚ್ಛತೆಗೆ ಆದ್ಯತೆ ನೀಡಲಾಗುವುದು ಎಂದು ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಕುಮಾರ್ ಯು.ಎಂ. ನೀಡಿದ್ದ ಭರವಸೆಯಂತೆ ಇದೀಗ ಅಭಿವೃದ್ಧಿ ಕಾಮಗಾರಿಗಳು ಒಂದೊಂದಾಗಿ ಅನುಷ್ಠಾನಗೊಳ್ಳುತ್ತಿವೆ.

ದೇವಾಲಯಕ್ಕೆ ಪ್ರತಿನಿತ್ಯ ಹಾಗೂ ವಿಶೇಷ ದಿನಗಳಲ್ಲಿ ಸಾವಿರಾರು ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ, ಶೌಚಾಲಯಗಳ ಸ್ವಚ್ಛತೆ ಮತ್ತು ನೈರ್ಮಲ್ಯ ಕಾಪಾಡುವುದು ಅತ್ಯಗತ್ಯವಾಗಿದೆ. ಈ ಉದ್ದೇಶದಿಂದ ಹೀರುವ ಯಂತ್ರದ ಮೂಲಕ ಸಮಗ್ರ ಸ್ವಚ್ಛತಾ ಕಾರ್ಯ ಕೈಗೊಂಡು ಭಕ್ತರಿಗೆ ಉತ್ತಮ ಮೂಲಸೌಕರ್ಯ ಒದಗಿಸುವತ್ತ ದೇವಾಲಯ ಆಡಳಿತ ಮಹತ್ವದ ಹೆಜ್ಜೆ ಇಟ್ಟಿದೆ.

ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್ ಕುಮಾರ್ ಯು.ಎಂ. ಅವರ ಮಾರ್ಗದರ್ಶನದಲ್ಲಿ ದೇವಾಲಯದಲ್ಲಿ ಸ್ವಚ್ಛತೆ, ಮೂಲಭೂತ ಸೌಲಭ್ಯಗಳ ಅಭಿವೃದ್ಧಿ, ಭಕ್ತರಿಗೆ ಅಗತ್ಯ ಸೌಕರ್ಯಗಳ ವಿಸ್ತರಣೆ ಸೇರಿದಂತೆ ಅಲ್ಪಾವಧಿ ಹಾಗೂ ದೀರ್ಘಾವಧಿ ಯೋಜನೆಗಳನ್ನು ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.

ಭಕ್ತರ ಅನುಕೂಲವೇ ಮೊದಲ ಆದ್ಯತೆಯಾಗಿದ್ದು, ದೇವಾಲಯದ ಪಾವಿತ್ರ್ಯ, ಸ್ವಚ್ಛತೆ ಹಾಗೂ ವ್ಯವಸ್ಥಿತ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು, ತ್ಯಾಜ್ಯ ನಿರ್ವಹಣೆ, ಸ್ವಚ್ಛ ಪರಿಸರ ಹಾಗೂ ಇತರೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೂ ವೇಗ ನೀಡಲಾಗುವುದು ಎಂದು ತಿಳಿದುಬಂದಿದೆ.

ದೇವಾಲಯದ ಅಭಿವೃದ್ಧಿ ಕಾರ್ಯಗಳು ಆರಂಭಗೊಂಡಿರುವುದಕ್ಕೆ ಭಕ್ತರು ಹಾಗೂ ಸ್ಥಳೀಯರು ಸಂತಸ ವ್ಯಕ್ತಪಡಿಸಿದ್ದು, ಇದೇ ರೀತಿಯಲ್ಲಿ ಯೋಜಿತ ಮತ್ತು ಪಾರದರ್ಶಕವಾಗಿ ಎಲ್ಲಾ ಕಾಮಗಾರಿಗಳು ಪೂರ್ಣಗೊಂಡು ಶ್ರೀ ಚೌಡೇಶ್ವರಿ (ಪುರದಮ್ಮ) ದೇವಾಲಯವು ರಾಜ್ಯದ ಮಾದರಿ ಧಾರ್ಮಿಕ ಕ್ಷೇತ್ರವಾಗಿ ರೂಪುಗೊಳ್ಳಲಿ ಎಂಬ ಆಶಯವನ್ನು ವ್ಯಕ್ತಪಡಿಸಿದ್ದಾರೆ.

Edited By :
PublicNext

PublicNext

22/07/2026 04:47 pm

Cinque Terre

11.04 K

Cinque Terre

0

ಸಂಬಂಧಿತ ಸುದ್ದಿ