ಕೋಲಾರ: ದೇಶದಲ್ಲಿ ನಡೆಯುತ್ತಿರುವ ನೀಟ್ ಪರೀಕ್ಷಾ ಅಕ್ರಮಗಳ, ಸೋರಿಕೆ, ನೇಮಕಾತಿ ವಿಳಂಬ ಹಾಗೂ ನಿರುದ್ಯೋಗ ಸಮಸ್ಯೆ ಖಂಡಿಸಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ವತಿಯಿಂದ 'ಛಾತ್ರೋನ್ ಕಿ ಗೂಂಜ್' ಅಭಿಯಾನವನ್ನು ರಾಷ್ಟ್ರವ್ಯಾಪಿ ತೀವ್ರಗೊಳಿಸಿದ ಭಾಗವಾಗಿ ನಗರದ ಮದರ್ ತೆರೇಸಾ ಕಾಲೇಜಿನಲ್ಲಿ ಆಯೋಜನೆ ಮಾಡಲಾಯಿತು, ಈ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಕಾರ್ಯಕ್ರಮದ ಜಿಲ್ಲಾ ಉಸ್ತುವಾರಿ ಬಿ.ಆರ್. ನಾಯ್ಡು ಮಾತನಾಡಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ನ್ಯಾಯಯುತ ವ್ಯವಸ್ಥೆಗೆ ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಶಾಂತಿಯುತ ಪ್ರತಿಭಟನೆಯನ್ನು ಪೊಲೀಸ್ ಬಲದ ಮೂಲಕ ಹತ್ತಿಕ್ಕಿರುವುದು ಖಂಡನೀಯ. ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆ, ಬೆದರಿಕೆ ಹಾಗೂ ಕಿರುಕುಳದ ಘಟನೆಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
Kshetra Samachara
22/07/2026 05:19 pm