ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಜಯಪುರ : ಬೆಳೆ ವಿಮೆ ಜಾಗೃತಿ ವಾಹನಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಚಾಲನೆ...

ಜಿಲ್ಲೆಯ ರೈತರಲ್ಲಿ ಬೆಳೆ ವಿಮೆ ಯೋಜನೆ ಕುರಿತು ವ್ಯಾಪಕ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳೆ ವಿಮೆ ಜಾಗೃತಿ ವಾಹನಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ‌ ನಿರ್ದೇಶಕ ಶಿವನಗೌಡ ಪಾಟೀಲ ಮಾದ್ಯಮದವರನ್ನು ಉದ್ದೇಶಿಸಿ ಮಾತನಾಡಿ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಅಡಿಯಲ್ಲಿ ನೊಂದಣಿಗೆ ಈ ವರ್ಷ ಜುಲೈ 31 ಕೊನೆಯ ದಿನಾಂಕ ನಿಗದಿಯಾಗಿದೆ. ಅದಕ್ಕೆ ಎಸ್ ಬಿ ಐ ಬ್ಯಾಂಕಿನ ಇನ್ಶೂರೆನ್ಸ್ ಕಂಪನಿಯವರು ರೈತರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಎರಡು ಸಂಚಾರಿ ವಾಹನಕ್ಕೆ ಚಾಲನೆಯನ್ನು‌ ಕೊಟ್ಟಿದ್ದಾರೆ. ಎಲ್ಲಾ ರೈತರಲ್ಲಿ ಸದುಪಯೋಗ ಪಡೆಸಿಕೊಳ್ಳುವಂತೆ ವಿನಂತಿಸಿದರು.

ಇನ್ನೂ ಕೃಷಿ‌ ಇಲಾಖೆಯ ಉಪ ನಿರ್ದೇಶಕ‌ ಚಂದ್ರಕಾಂತ ಪವಾರ ಮಾತನಾಡಿ ​ಈ ಪ್ರಸಕ್ತ ಸಾಲಿನಲ್ಲಿ ವಿಜಯಪುರ ಜಿಲ್ಲೆಗೆ ಈ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನ ಮಾಡ್ತಾ ಇದ್ದೇವೆ. ಆ ನಿಟ್ಟಿನಲ್ಲಿ ವಿಜಯಪುರ ಜಿಲ್ಲೆಯಲ್ಲಿ ಹತ್ತಿ, ತೊಗರಿ ಮತ್ತೆ ಇತರೆ ಬೆಳೆಗಳು ರೈತರು ಬೆಳೆದಿದ್ದಾರೆ. ಮತ್ತೆ ಮಳೆಯ ಅಭಾವ ಮತ್ತು ಆ ಬರ ಪೀಡಿತ ಹಿನ್ನೆಲೆಯಲ್ಲಿ ಮಳೆ ಕೊರತೆ ಇರುವುದರಿಂದ ರೈತರಿಗೆ ಬೆಳೆ ವಿಮೆ ಉಪಯೋಗವಾಗುತ್ತದೆ ಎಂದರು.

ಇನ್ನೂ ಈ ಸಂದರ್ಭದಲ್ಲಿ ಕೃಷಿ ತಾಂತ್ರಿಕ ಅಧಿಕಾರಿ ರಾಜೇಂದ್ರಗೌಡ ಪಾಟೀಲ ಹಾಗೂ ವಿಮಾ ಕಂಪನಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Edited By :
PublicNext

PublicNext

22/07/2026 05:50 pm

Cinque Terre

11.95 K

Cinque Terre

0

ಸಂಬಂಧಿತ ಸುದ್ದಿ