ಚಿಂತಾಮಣಿ: ನಗರದಲ್ಲಿ ಮಾದಕ ವಸ್ತುಗಳ ಅಕ್ರಮ ಸಾಗಾಣಿಕೆ ಮತ್ತು ಮಾರಾಟವನ್ನು ತಡೆಯಲು ಅಬಕಾರಿ ಇಲಾಖೆ ಕೈಗೊಂಡ ವಿಶೇಷ ಕಾರ್ಯಾಚರಣೆಯಲ್ಲಿ ನಿಷೇಧಿತ ಎಂಡಿಎಂಎ (MDMA) ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ.
ರಾತ್ರಿ ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಸರ್ಕಲ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಹೋಗುವ ರಸ್ತೆಯಲ್ಲಿರುವ 'ಇಂಡಿಯನ್ ಆಟೋಮೊಬೈಲ್' ಅಂಗಡಿಯ ಮೇಲೆ ದಾಳಿ ನಡೆಸಲಾಯಿತು. ಬಂಧಿತ ಆರೋಪಿಯನ್ನು ಅರ್ಬಾಜ್ ಪಾಷಾ ಅಲಿಯಾಸ್ ನವಾಜ್ ಪಾಷಾ (22 ವರ್ಷ) ಎಂದು ಗುರುತಿಸಲಾಗಿದೆ.
ಆರೋಪಿಯಿಂದ ಸುಮಾರು ₹50,000 ಮೌಲ್ಯದ 2.210 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಡ್ರಗ್ಸ್ ಸೇವನೆಗೆ ಬಳಸುತ್ತಿದ್ದ ಗಾಜಿನ ಕೊಳವೆಯನ್ನು ಜಪ್ತಿ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲಾ ಅಬಕಾರಿ ಉಪ ಆಯುಕ್ತರ ಮಾರ್ಗದರ್ಶನದಲ್ಲಿ, ಅಬಕಾರಿ ಉಪ ಅಧೀಕ್ಷಕ ಜಿ.ಎಸ್. ಪಾಟೀಲ್ ಅವರ ನೇತೃತ್ವದಲ್ಲಿ ಈ ದಾಳಿ ನಡೆಯಿತು. ಈ ತಂಡದಲ್ಲಿ ಅಬಕಾರಿ ನಿರೀಕ್ಷಕಿ ರೇಣುಕಾ ವಿ., ಉಪನಿರೀಕ್ಷಕ ಉಚ್ಚಪ್ಪ, ಸಿಬ್ಬಂದಿಯಾದ ಮೋಹನ್ ಎಂ., ಶಿವಸ್ವಾಮಿ ಸಿ.ಎಸ್., ಚಾಲಕ ಮಂಜುನಾಥ್ ಹಾಗೂ ಗೃಹರಕ್ಷಕ ಸಿಬ್ಬಂದಿ ಭಾಗವಹಿಸಿದ್ದರು.
ಇತ್ತೀಚಿನ ದಿನಗಳಲ್ಲಿ ಚಿಂತಾಮಣಿ ವ್ಯಾಪ್ತಿಯಲ್ಲಿ ಅಬಕಾರಿ ಇಲಾಖೆ ಸಾಲು ಸಾಲು ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳನ್ನು ಜಪ್ತಿ ಮಾಡುತ್ತಿರುವುದು ಸಾರ್ವಜನಿಕ ವಲಯದಲ್ಲಿ ಶ್ಲಾಘನೆಗೆ ಪಾತ್ರವಾಗಿದೆ.
- ಚಿಕ್ಕತೇಕಹಳ್ಳಿ ಡಿ. ಶಿವಕುಮಾರ್, ಪಬ್ಲಿಕ್ ನೆಕ್ಸ್ಟ್, ಚಿಕ್ಕಬಳ್ಳಾಪುರ
PublicNext
22/07/2026 07:39 pm
LOADING...