ಹುಬ್ಬಳ್ಳಿ: ಕಾಂಗ್ರೆಸ್ ಮುಖಂಡರಾದ ಸಂತೋಷ ಗುರಪ್ಪ ಛಲವಾದಿ ಕಾಂಗ್ರೆಸ್ ಪಕ್ಷದಲ್ಲಿ ಒಂದಿಲ್ಲೊಂದು ಕಾರ್ಯದ ಮೂಲಕ ಜನರ ವಿಶ್ವಾಸ, ಪ್ರೀತಿ ಗಳಿಸಿದ್ದು, ಈಗ ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ನೂತನವಾಗಿ ನೇಮಕಗೊಂಡ ಸಂತೋಷ ಛಲವಾದಿ ಅವರಿಗೆ ಕಾಂಗ್ರೆಸ್ ಮುಖಂಡರು ಹಾಗೂ ಸಮಾಜ ಸೇವಕ ಪ್ರವೀಣ ಕಟ್ಟಿ ಹಾಗೂ ಕುಟುಂಬಸ್ಥರು ಶುಭ ಹಾರೈಸಿದ್ದಾರೆ.
ಪಕ್ಷದ ಸಂಘಟನೆ ಬಲಪಡಿಸುವುದು, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಹಾಗೂ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವುದು ಮತ್ತು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜವಾಬ್ದಾರಿಯನ್ನು ಸಂತೋಷ ಛಲವಾದಿ ಅವರಿಗೆ ನೀಡಲಾಗಿದ್ದು, ಇಂತಹ ಜವಾಬ್ದಾರಿಯ ನಿಭಾಯಿಸುವ ಜೊತೆಗೆ ಜನರಿಗೆ ಹೆಚ್ಚಿನ ಸೇವೆ ಮಾಡುವ ಶಕ್ತಿ ಆ ದೇವರು ನೀಡಲಿ ಎಂದು ಕಟ್ಟಿ ಪರಿವಾರದಿಂದ ಶ್ರೀಯುತ ಅಪ್ಪಾಸಾಹೇಬ ಕಟ್ಟಿಯವರು ಶುಭ ಹಾರೈಸಿದ್ದಾರೆ.
ಶುಭಾಶಯ ಕೋರುವವರು
ಶ್ರೀ ಪ್ರವೀಣ ಕಟ್ಟಿ
ಕಾಂಗ್ರೆಸ್ ಯುವ ಮುಖಂಡರು ಹಾಗೂ ಸಮಾಜ ಸೇವಕರು ಹುಬ್ಬಳ್ಳಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/07/2026 10:59 pm
LOADING...