ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಮಾಜಿಕ ನ್ಯಾಯ & ವಿವಿಧ ಬೇಡಿಕೆ ಈಡೇರಿಕೆಗೆ ಪ್ರೊಟೆಸ್ಟ್

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ವಿವಿಧ ಸಮುದಾಯಗಳ ಮುಖಂಡರು, ಯುವಕರು, ರೈತರು ಬೃಹತ್ ಕಾಲ್ನಡಿಗೆ ಪ್ರತಿಭಟನೆ ನಡೆಸಿದರು.

ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು. ಬಳಿಕ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಸಾಮಾಜಿಕ ನ್ಯಾಯದ ತತ್ವಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯನ್ನು ಜಾರಿಗೊಳಿಸಬೇಕು ಹಾಗೂ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ಮರುಸ್ಥಾಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಅಲ್ಲದೆ, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕು, ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಬೇಕು ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳನ್ನು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ರು.

Edited By :
PublicNext

PublicNext

23/07/2026 08:43 am

Cinque Terre

10.94 K

Cinque Terre

0

ಸಂಬಂಧಿತ ಸುದ್ದಿ