ಚಿತ್ರದುರ್ಗ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದೆಹಲಿ ಪ್ರತಿಭಟನೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಶಕ್ಕೆ ಪಡೆದ ಪೊಲೀಸರ ನಡೆ ಖಂಡಿಸಿ ಚಿತ್ರದುರ್ಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ನಗರದ ಗಾಂಧಿ ವೃತ್ತದಲ್ಲಿ ಸೇರಿ ಪ್ರತಿಭಟನೆ ಮಾಡಿದ್ದಾರೆ. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕೈ ಯುವಕರು ಟೈರ್‌ಗೆ ಬೆಂಕಿ ಹಚ್ಚಿ ಕೇಂದ್ರ ಬಿಜೆಪಿ ಸರ್ಕಾರ, ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಬೆಂಕಿ ನಂದಿಸಿ ಪ್ರತಿಭಟನೆ ತಿಳಿಗೊಳಿಸಿದ್ದಾರೆ. ಯುವಕರ ಹುಚ್ಚಾಟಕ್ಕೆ ವಾರ್ನಿಂಗ್ ಕೊಟ್ಟು ಚದುರಿಸಿದ್ದಾರೆ.
PublicNext
23/07/2026 09:17 am