ಮುಂಡರಗಿ: ಸಿಂಗಟಾಲೂರು ಏತ ನೀರಾವರಿ ಯೋಜನೆಯ ನೀರನ್ನು ಪ್ರಸಕ್ತ ಸಾಲಿಗೆ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ನಿರ್ಧರಿಸಲಾಗಿದೆ. ಈ ಕುರಿತು ಕರ್ನಾಟಕ ನೀರಾವರಿ ನಿಗಮ ಪ್ರಕಟಣೆ ಹೊರಡಿಸಿದೆ.
ರಾಜ್ಯ ಹಾಗೂ ರಾಷ್ಟ್ರೀಯ ಜಲನೀತಿಯನ್ವಯ ಕುಡಿಯುವ ನೀರಿಗೆ ಪ್ರಥಮ ಆದ್ಯತೆ ನೀಡಬೇಕಿದೆ. ಆ ಕಾರಣವಾಗಿ ಲಭ್ಯವಿರುವ ನೀರನ್ನು 2026-27ನೇ ಸಾಲಿಗೆ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕಾಯ್ದಿರಿಸಿಕೊಂಡು ಬಳಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಮ್ಮಿಗಿ ಬ್ಯಾರೇಜ್‌ನಲ್ಲಿ ಸದ್ಯ 3.17 ಟಿಎಂಸಿ ನೀರಿನ ಸಂಗ್ರಹವಿದ್ದು, ಒಂದು ತಿಂಗಳ ಮೊದಲು ಇದ್ದ ಒಳಹರಿವು ಕಡಿಮೆಯಾಗಿರುವುದರಿಂದ ನೀರಾವರಿ ನಿಗಮ ನಿಯಮದನ್ವಯ ಈ ಕ್ರಮಕ್ಕೆ ಮುಂದಾಗಿದೆ. ಇದರಿಂದ ಹಮ್ಮಿಗಿ ಜಲಾಶಯದ ವ್ಯಾಪ್ತಿಯಲ್ಲಿನ ಕಾಲುವೆಗಳಿಗೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಇದು ರೈತರ ಆತಂಕಕ್ಕೆ ಕಾರಣವಾಗಿದೆ.
Kshetra Samachara
23/07/2026 12:03 pm
LOADING...