ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರದಲ್ಲಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಭೇಟಿ: ರೈತರ ಪರಿಹಾರ ಆಗ್ರಹ

ಕೋಲಾರ - ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಕೋಲಾರ ತಾಲ್ಲೂಕಿನ ನರಸಾಪುರ ಹೋಬಳಿಯ ದಿನ್ನೆ ಹೊಸಹಳ್ಳಿ ಗ್ರಾಮದ ಕೃಷಿ ಭೂಮಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿತ್ತನೆಯಾಗದೆ ಒಣಗುತ್ತಿರುವ ಭೂಮಿಯನ್ನು ಪರಿಶೀಲಿಸಿದರು.

ಈ ಸಂದರ್ಭದಲ್ಲಿ ರೈತರ ಸಮಸ್ಯೆ ಆಲಿಸಿದರು. ತದನಂತರ ಚಿಕ್ಕನಹಳ್ಳಿ ಗ್ರಾಮದ ಸಂಪೂರ್ಣ ಬತ್ತಿಹೋಗಿರುವ ಕೆರೆಗೆ ಭೇಟಿ ನೀಡಿದ ಪರಮೇಶ್ವರ, ಸ್ಥಳೀಯ ರೈತರು ಹಾಗೂ ಗ್ರಾಮಸ್ಥರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸರ್ಕಾರ ಸದಾ ತಮ್ಮೊಂದಿಗೆ ಇರಲಿದೆ ಎಂದು ಧೈರ್ಯ ತುಂಬಿದರು. ಶಾಸಕರಾದ‌ ಕೊತ್ತೂರು ಮಂಜುನಾಥ್, ಕೆ.ವೈ.ನಂಜೇಗೌಡ, ಜಿಲ್ಲಾಧಿಕಾರಿ ಎಂ‌.ಆರ್.ರವಿ, ಜಿ.ಪಂ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ತಹಶೀಲ್ದಾರ್‌ ಶ್ರೀನಿವಾಸ್‌, ಕೃಷಿ ಜಂಟಿ ನಿರ್ದೇಶಕಿ ಮಂಜುಳಾ ಇದ್ದರು.

Edited By : PublicNext Desk
Kshetra Samachara

Kshetra Samachara

23/07/2026 03:03 pm

Cinque Terre

560

Cinque Terre

0

ಸಂಬಂಧಿತ ಸುದ್ದಿ