ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಳೆಯ ಅಬ್ಬರಕ್ಕೆ ಉತ್ತರ ಕನ್ನಡ ತತ್ತರ; 4 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಸಿದ್ದಾಪುರ, ಜೋಯಿಡಾ, ದಾಂಡೇಲಿ ಹಾಗೂ ಶಿರಸಿ ತಾಲ್ಲೂಕಿನ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ಜುಲೈ 24ರಂದು ರಜೆ ಘೋಷಿಸಲಾಗಿದೆ.

ಭಾರೀ ಮಳೆ, ಸುರಕ್ಷತಾ ದೃಷ್ಟಿಕೋನ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅವರು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಅನಗತ್ಯವಾಗಿ ಹೊರಗಡೆ ಸಂಚರಿಸದಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Edited By :
Kshetra Samachara

Kshetra Samachara

24/07/2026 08:05 am

Cinque Terre

5.96 K

Cinque Terre

0

ಸಂಬಂಧಿತ ಸುದ್ದಿ