ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ - ಜಂತರ್ ಮಂತರ್‌ನಲ್ಲಿ ಹಲ್ಲೆ ಖಂಡಿಸಿ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದಿಂದ ಪಂಜಿನ ಮೆರವಣಿಗೆ

ಕೋಲಾರ: ನವದೆಹಲಿಯ ಜಂತರ್ ಮಂತರ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಹಾಗೂ ಪ್ರತಿಭಟನಾನಿರತ ಕಾರ್ಯಕರ್ತರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಾಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವಿಭಾಗದ ವತಿಯಿಂದ ನಗರದಲ್ಲಿ ಪಂಜಿನ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.‌

ನಗರದ ವಾಲ್ಮೀಕಿ ವೃತ್ತದಿಂದ ಪ್ರಾರಂಭವಾಗಿ ಎಂಜಿ ರಸ್ತೆ ಮೂಲಕ ಗಾಂಧಿವನದವರಗೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ, ಪ್ರಜಾಪ್ರಭುತ್ವದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳನ್ನು ತಕ್ಷಣ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾ ಅಧ್ಯಕ್ಷ ಎನ್ ಅಂಬರೀಶ್ ಮಾತನಾಡಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಕಾಂಗ್ರೆಸ್ ನಾಯಕರ ಹಾಗೂ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿರುವುದು ಖಂಡನೀಯವಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಸಂವಿಧಾನ ನೀಡಿರುವ ಪ್ರತಿಭಟನೆಯ ಹಕ್ಕನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು.‌

Edited By : PublicNext Desk
Kshetra Samachara

Kshetra Samachara

24/07/2026 08:51 am

Cinque Terre

560

Cinque Terre

0

ಸಂಬಂಧಿತ ಸುದ್ದಿ