ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಬುರಗಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಾಮಾಜಿಕ ಅರಣ್ಯೀಕರಣ ಅಭಿಯಾನ

ಕಲಬುರಗಿ: ಪರಿಸರ ಸಂರಕ್ಷಣೆ ಮತ್ತು ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಚಿಂಚೋಳಿ ಯೋಜನೆಯ ನಿಡಗುಂದ ಕಾರ್ಯಕ್ಷೇತ್ರದ ವತಿಯಿಂದ ಗುರುವಾರ ನಿಡಗುಂದದ ಮೊರಾರ್ಜಿ ದೇಸಾಯಿ ವಸತಿಯುತ ಶಾಲೆಯಲ್ಲಿ ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮದಡಿ ಹಣ್ಣಿನ ಸಸಿಗಳನ್ನು ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಕಂಚಾಳಕುಂಟಿ ನಂದೀಶ್ವರ ಮಠದ ಪೂಜ್ಯ ಷ. ಬ್ರ. ಶ್ರೀ ಕರುಣೇಶ್ವರ ಮಹಾಸ್ವಾಮಿಗಳು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶಿವಶರಣಪ್ಪ ಆರ್. ಶಂಕರ್, ಮುಕುಂದ ದೇಶಪಾಂಡೆ ಹಾಗೂ ಸಿದ್ದರಾಮೇಶ್ ನಿಷ್ಟಿ ಭಾಗವಹಿಸಿ ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.

ಶಾಲೆಯ ಪ್ರಾಚಾರ್ಯ ಮಡಿವಾಳಪ್ಪ ಪಾಸೋಡಿ ಅಧ್ಯಕ್ಷತೆ ವಹಿಸಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಗಣಪತಿ ಮಾಳಂಜಿ, ಯೋಜನಾಧಿಕಾರಿ ಕೇಶವ್, ಕೃಷಿ ಮೇಲ್ವಿಚಾರಕ ಸತೀಶ್ ಕೆ.ಎಚ್. ಹಾಗೂ ವಲಯ ಮೇಲ್ವಿಚಾರಕಿ ವಿದ್ಯಾ ಉಪಸ್ಥಿತರಿದ್ದರು.

ಶಾಲೆಯ ಆವರಣದಲ್ಲಿ 500ಕ್ಕೂ ಅಧಿಕ ಹಣ್ಣಿನ ಸಸಿಗಳನ್ನು ನೆಡಲಾಯಿತು. ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣಕ್ಕೆ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಗಣ್ಯರು ಅಭಿಪ್ರಾಯಪಟ್ಟರು.

Edited By :
PublicNext

PublicNext

24/07/2026 11:28 am

Cinque Terre

9.35 K

Cinque Terre

0

ಸಂಬಂಧಿತ ಸುದ್ದಿ