ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಆ. 7, 8 ರಂದು 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026'

ಉಡುಪಿ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಯೋಜಿಸಲಾಗುತ್ತಿರುವ 16ನೇ ಆವೃತ್ತಿಯ ಉಚಿತ ಬೃಹತ್ ಉದ್ಯೋಗ ಮೇಳ 'ಆಳ್ವಾಸ್ ಪ್ರಗತಿ–2026' ಆಗಸ್ಟ್‌ 7 ಮತ್ತು 8ರಂದು ಮೂಡುಬಿದಿರೆಯ ಆಳ್ವಾಸ್ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಕಾಲೇಜಿನ ಪ್ರಾಂಶುಪಾಲ ಡಾ. ಕುರಿಯನ್ ತಿಳಿಸಿದರು.

ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿ ಈಗಾಗಲೇ 276 ಕಂಪನಿಗಳು ನೋಂದಾಯಿಸಿಕೊಂಡಿದ್ದು, 350ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸುವ ನಿರೀಕ್ಷೆಯಿದೆ. 15,860ಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿದ್ದು, ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, ಹಣಕಾಸು, ಆರೋಗ್ಯ, ಔಷಧ, ಮಾಧ್ಯಮ, ಎಲೆಕ್ಟ್ರಾನಿಕ್ಸ್, ದೂರಸಂಪರ್ಕ, ನಿರ್ಮಾಣ, ಆತಿಥ್ಯ ಹಾಗೂ ಮಾರಾಟ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರತಿಷ್ಠಿತ ಕಂಪನಿಗಳು ನೇಮಕಾತಿ ನಡೆಸಲಿವೆ ಎಂದರು.

ಇನ್ಫೋಸಿಸ್ ಬಿಪಿಎಂ, ಟೆಕ್ ಮಹೀಂದ್ರ ಬಿಪಿಒ, ಟಾಟಾ ಎಲೆಕ್ಟ್ರಾನಿಕ್ಸ್, ಟೊಯೋಟಾ ಕಿರ್ಲೋಸ್ಕರ್, ಮಹೀಂದ್ರ ಫೈನಾನ್ಸ್, ಎಎನ್‌ಝಡ್, ಇಎಕ್ಸ್‌ಎಲ್, ಕಾನ್ಸೆಂಟ್ರಿಕ್ಸ್, ಟೆಲಿಪರ್ಫಾರ್ಮೆನ್ಸ್, ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್, ವೊಕ್ಹಾರ್ಟ್ ಆಸ್ಪತ್ರೆ, ಸಕ್ರಾ ವರ್ಲ್ಡ್ ಆಸ್ಪತ್ರೆ, ಅಪೋಲೊ ಆಸ್ಪತ್ರೆ, ಏರ್‌ಟೆಲ್ ಹಾಗೂ ಜಿಯೋ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳು ಪಾಲ್ಗೊಳ್ಳಲಿವೆ ಎಂದು ತಿಳಿಸಿದರು.

ಪದವಿ, ಸ್ನಾತಕೋತ್ತರ, ಬಿ.ಟೆಕ್, ಐಟಿಐ, ಡಿಪ್ಲೊಮಾ, ನರ್ಸಿಂಗ್, ವೈದ್ಯಕೀಯ, ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಹಾಗೂ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು. ಪಿಯುಸಿ, ಎಸ್‌ಎಸ್‌ಎಲ್‌ಸಿ ಹಾಗೂ ಕೌಶಲ್ಯಾಧಾರಿತ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೂ ಉದ್ಯೋಗಾವಕಾಶಗಳಿವೆ ಎಂದರು.ಸುದ್ದಿಗೋಷ್ಠಿಯಲ್ಲಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ, ಆಳ್ವಾಸ್ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿಯ ಸಹಾಯಕ ಪ್ರಾಧ್ಯಾಪಕ ಶ್ರೀನಿವಾಸ್ ಸಿ.ಎಸ್. ಹಾಗೂ ಆಳ್ವಾಸ್ ಸಮಾಜಶಾಸ್ತ್ರ ವಿಭಾಗದ ಅಂಬಾಸಿಡರ್ ಈಶ್ವರ್ ಮಲ್ಪೆ ಉಪಸ್ಥಿತರಿದ್ದರು.

Edited By :
PublicNext

PublicNext

24/07/2026 01:36 pm

Cinque Terre

12.28 K

Cinque Terre

0

ಸಂಬಂಧಿತ ಸುದ್ದಿ