ಶ್ರೀನಿವಾಸಪುರ: ದೇವಸ್ಥಾನಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಅರಿಕೆರೆ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ಚಿಂತಾಮಣಿಯ ಶಶಿ (25) ಮತ್ತು ನೆಲಮಂಗಲದ ತನುಷ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರದ ಕಾಣಿಪಾಕಂ ದೇವಾಲಯಕ್ಕೆ ಬುಲೆಟ್‌ನಲ್ಲಿ ತೆರಳುತ್ತಿದ್ದಾಗ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
24/07/2026 03:08 pm
LOADING...