ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಶಾಸಕ ಟಿ.ರಘುಮೂರ್ತಿಗೆ ಮಂತ್ರಿ ಸ್ಥಾನ ಸಿಗುವಂತೆ ಪ್ರಾರ್ಥಿಸಿ ವಿಶೇಷ ಪೂಜೆ

ಚಿತ್ರದುರ್ಗ: ರಾಜ್ಯದಲ್ಲಿ ಹೊಸ ಸರ್ಕಾರದ ರಚನೆ ಹಾಗೂ ಡಿ.ಕೆ.ಶಿವಕುಮಾರ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮೊದಲ ಬಾರಿ ಚಿತ್ರದುರ್ಗಕ್ಕೆ ಆಗಮಿಸುತ್ತಿದ್ದು, ಮುಖ್ಯಮಂತ್ರಿಗಳಾಗಿ ಸರ್ಕಾರ ಯಶಸ್ವಿಯಾಗಿ ಮುನ್ನಡೆಸಲಿ ಹಾಗೂ ಚಳ್ಳಕೆರೆ ಕ್ಷೇತ್ರದ ಹ್ಯಾಟ್ರಿಕ್ ವಿಜಯಶಾಲಿ,ಶಾಸಕ ಟಿ. ರಘುಮೂರ್ತಿ ರವರಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯಲಿ ಎಂದು ಕೋರಿ ಚಿತ್ರದುರ್ಗ ನಗರದ ಶ್ರೀ ಬರಗೇರಮ್ಮ ದೇವಸ್ಥಾನದಲ್ಲಿ ಟಿ. ರಘುಮೂರ್ತಿ ಯುವಸೇನೆ ವತಿಯಿಂದ ವಿಶೇಷ ಪೂಜೆ ನೆರವೇರಿಸಲಾಯಿತು.

ಬರಗೇರಮ್ಮ ದೇವಿಯ ಸನ್ನಿಧಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಶಾಸಕ ಟಿ. ರಘುಮೂರ್ತಿ ಅವರ ಭಾವಚಿತ್ರಗಳನ್ನು ಇರಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಒಡಲಕ್ಕಿ ಸೇವೆ ನಡೆಸಿ, ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮಗಳನ್ನು ಭಕ್ತಿಭಾವದಿಂದ ನಡೆಸಲಾಯಿತು. ಕಾರ್ಯಕ್ರಮದ ಅಂಗವಾಗಿ ನೂರಾರು ಭಕ್ತರು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಲಾಯಿತು.

Edited By : Somashekar
PublicNext

PublicNext

24/07/2026 06:50 pm

Cinque Terre

8.31 K

Cinque Terre

0

ಸಂಬಂಧಿತ ಸುದ್ದಿ