ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗದಗ: ಜಿಲ್ಲಾಡಳಿತ ಭವನದಲ್ಲಿಯೇ ಲೋಕಾಯುಕ್ತ ಪೊಲೀಸರ ಬಲೆಗೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ

ಗದಗ: ಹೊರಗುತ್ತಿಗೆ ಸಿಬ್ಬಂದಿ ಅಭಿಷೇಕ್ ಎಂಬುವವರು ನೀಡಿದ ದೂರಿನ ಮೇರೆಗೆ ವೇತನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಫೀಕಾ ಹಳ್ಳೂರು ಹಾಗೂ ಕಾರು ಚಾಲಕ ಮೌಲಾಹುಸೇನ ಅವರು ಜಿಲ್ಲಾಡಳಿತ ಭವನದಲ್ಲಿಯೇ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಹೊರಗುತ್ತಿಗೆ ಸಿಬ್ಬಂದಿಯ ವೇತನ ಬಿಡುಗಡೆ ಮಾಡಲು 30 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ರಫೀಕಾ ಹಳ್ಳೂರು, ಮೊದಲ ಕಂತಾಗಿ 15 ಸಾವಿರ ರೂ. ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ಇಬ್ಬರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ.

Edited By : Nagaraj Tulugeri
PublicNext

PublicNext

24/07/2026 07:12 pm

Cinque Terre

10.15 K

Cinque Terre

0

ಸಂಬಂಧಿತ ಸುದ್ದಿ