ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತಾರಾಷ್ಟ್ರೀಯ ಗುಣಮಟ್ಟದ 3 ಹೊಸ ಪೋಲ್ ವಿತರಿಸಿ ಶುಭ ಹಾರೈಸಿದ ಡಿಸಿಎಂ ಡಾ.ಜಿ.ಪರಮೇಶ್ವರ್

ಬೆಂಗಳೂರು: ಪೋಲ್ ವಾಲ್ಟ್ ಕ್ರೀಡೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಅಮೋಘ ಸಾಧನೆ ಮಾಡುವ ಮೂಲಕ ಜಪಾನ್‌ನಲ್ಲಿ ನಡೆಯಲಿರುವ ಏಷ್ಯನ್‌ ಗೇಮ್ಸ್‌ಗೆ ಆಯ್ಕೆಯಾಗಿರುವ ಸಿಂಧುಶ್ರೀ ಗಣೇಶ್ ಅವರಿಗೆ ಉಪ ಮುಖ್ಯಮಂತ್ರಿ, ಕಂದಾಯ ಮತ್ತು ಕ್ರೀಡಾ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಅಂತಾರಾಷ್ಟ್ರೀಯ ಗುಣಮಟ್ಟದ 3 ಪೋಲ್‌ಗಳನ್ನು ವಿತರಿಸಿ, ಶುಭ ಹಾರೈಸಿದರು.

ಆ ಬಳಿಕ ನಡೆದ ಮಾಧ್ಯಮಗೋಷ್ಠಿಯಲ್ಲಿ ಈ ಕುರಿತು ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಸಿಂಧುಶ್ರೀ ಅವರು ಪೋಲ್ ವಾಲ್ಟ್ ಕ್ರೀಡೆಯಲ್ಲಿ ಸಾಧನೆ ಮಾಡಿದ್ದಾರೆ. ಅವರಿಗಾಗಿ ಕರ್ನಾಟಕ ರಾಜ್ಯ ಕ್ರೀಡಾ‌ ಮತ್ತು ಯುವ ಸಬಲೀಕರಣ ಇಲಾಖೆ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ ವತಿಯಿಂದ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಬಳಸುವ ಗುಣಮಟ್ಟದ 3 ಹೊಸ ಪೋಲ್‌ಗಳನ್ನು ವಿದೇಶದಿಂದ ತರಿಸಿ ಕೊಡಲಾಗಿದೆ. ಅದರ ಜೊತೆಗೆ 5 ಲಕ್ಷ ಹಣವನ್ನೂ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಕೂಲಿ‌ ಕೆಲಸ‌ ಮಾಡುತ್ತಿದ್ದ ಗಣೇಶ್ ಅವರಿಗೆ ತಮ್ಮ ಪುತ್ರಿಯನ್ನು ಕ್ರೀಡಾಪಟುವನ್ನಾಗಿ ಮಾಡುವ ಆಸೆಯಿತ್ತು. ಅದಕ್ಕಾಗಿ ಚೆನ್ನಾಗಿ ತರಬೇತಿಯನ್ನು ಕೊಡಿಸುತ್ತಾರೆ.‌ ಆನಂತರ ಕ್ರೀಡಾಸಕ್ತರು ಗಮನಿಸಿ, ಚೆನ್ನಾಗಿ ಓಡುತ್ತೀಯ‌. ಬೆಂಗಳೂರಿನಲ್ಲಿ ತರಬೇತಿ ಪಡೆಯುವಂತೆ ಹೇಳಿ ಆಕೆಯನ್ನು ಕಳುಹಿಸಿ ಕೊಡುತ್ತಾರೆ. ಆಕೆಯ ಟ್ಯಾಲೆಂಟ್ ಗುರುತಿಸಿ ಪೋಲೋ ವಾಲ್ಟ್‌ಗೆ ತಯಾರಿ‌ ಮಾಡುತ್ತಾರೆ. ಸ್ಪೋರ್ಟ್ಸ್ ಆಥಾರಿಟಿ ಆಫ್ ಇಂಡಿಯಾ ಸಂಸ್ಥೆಯಿಂದ ತರಬೇತಿ ಪಡೆದುಕೊಂಡು ಸಿಂಧುಶ್ರೀ ಗಣೇಶ್ ಇದೀಗ ಏಷ್ಯನ್ ಗೇಮ್ಸ್‌ಗೆ ಅರ್ಹತೆ ಪಡೆದು ಕೊಂಡಿದ್ದಾರೆ. ಜಪಾನ್‌ನಲ್ಲಿ‌ ನಡೆಯಲಿರುವ ಏಷ್ಯನ್ ಗೇಮ್ಸ್‌ನಲ್ಲಿ ಪೋಲೋ ವಾಲ್ಟ್ ಕ್ರೀಡಾಪಟುವಾಗಿ ಭಾರತವನ್ನು ಪ್ರತಿನಿಧಿಸಲಿದ್ದಾರೆ‌ ಎಂದು ವಿವರಿಸಿದರು.

ಯುವತಿಯ ತಂದೆ ಗಣೇಶ್ ಅವರು ಈಗ ನಮ್ಮ ಜೊತೆಗಿಲ್ಲ. ಆದರೆ ತಂದೆಯ ಆಸೆಯನ್ನು ಸಿಂಧುಶ್ರೀ ಪೂರೈಸಿದ್ದಾರೆ. ತಾಯಿ ಮನೆ ಕೆಲಸ ಮಾಡಿ, ಪುತ್ರಿಯನ್ನು ಪ್ರೋತ್ಸಾಹಿಸಿದ್ದಾರೆ. ಬಡ ಕುಟುಂಬದ ಈ ಹೆಣ್ಣು ಮಗಳಿಗೆ ಶುಭವಾಗಲಿ. ಏಷ್ಯನ್ ಗೇಮ್ಸ್‌ನಲ್ಲಿ ಸಾಧನೆ ಮಾಡಿ, ದೇಶಕ್ಕೆ ಪದಕ ತರುವ‌ ಮೂಲಕ ನಮ್ಮ ನಾಡಿನ ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ , ಆಯುಕ್ತ ಎಂ.ಎನ್.ಅನುಚೇತ್, ಸರ್ಕಾರಿ ವಿಮಾನ ಯಾನ ತರಬೇತಿ ಶಾಲೆಯ ನಿರ್ದೇಶಕ ಬಸವರಾಜ್ ಮುಂತಾದವರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

24/07/2026 09:10 pm

Cinque Terre

14.05 K

Cinque Terre

0

ಸಂಬಂಧಿತ ಸುದ್ದಿ