ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಗುಂಡ್ಲುಪೇಟೆ: ನಿಯಮಾವಳಿ ಉಲ್ಲಂಘಿಸಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಮಸ್ತಿ.!

ಗುಂಡ್ಲುಪೇಟೆ: ಅರಣ್ಯ ಇಲಾಖೆಯ ನಿಯಮಾವಳಿಯನ್ನು ಉಲ್ಲಂಘಿಸಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಅರಣ್ಯ ಪ್ರವೇಶಿಸಿ ಮಸ್ತಿ ಮಾಡಿದ್ದ ತಮಿಳುನಾಡು ಮೂಲದ ವ್ಯಕ್ತಿಯನ್ನು ಪತ್ತೆಹಚ್ಚಿರುವ ಅರಣ್ಯ ಇಲಾಖೆ ₹25 ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದೆ.

ಮೂರ್ನಾಲ್ಕು ದಿನದ ಹಿಂದಷ್ಟೇ ಇಲಾಖೆಯ ನಿಯಮವನ್ನೇ ಗಾಳಿಗೆ ತೂರಿ ಅತಿಕ್ರಮ ಪ್ರವೇಶ ಮಾಡಿ ಉದ್ಧಟತನ ತೋರಿದ್ದ ತಮಿಳುನಾಡಿನ ಕೊಯಂಬತ್ತೂರಿನ ವಡವಳ್ಳಿ ನಿವಾಸಿ ಮಣಿ ಎಂಬಾತನನ್ನು ಪತ್ತೆಹಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು ದಂಡದ ಬಿಸಿ ಮುಟ್ಟಿಸಿ ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ. ಅರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿದ್ದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಜೊತೆಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕೆಕ್ಕನಹಳ್ಳ ತನಿಖಾ ಠಾಣೆಯಲ್ಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ ಅಧಿಕಾರಿಗಳು ಅರಣ್ಯ ಕಾಯ್ದೆಯಡಿ ₹25 ಸಾವಿರ ದಂಡ ವಿಧಿಸಿ ತಪ್ಪೊಪ್ಪಿಗೆ ಪತ್ರ ಪಡೆದಿದ್ದಾರೆ.

Edited By :
PublicNext

PublicNext

25/07/2026 07:33 am

Cinque Terre

11.06 K

Cinque Terre

1

ಸಂಬಂಧಿತ ಸುದ್ದಿ