ಚಾಮರಾಜನಗರ: ವಿದ್ಯಾರ್ಥಿಗಳನ್ನು ಉತ್ತಮ ಸಂಸ್ಕಾರ, ನೈತಿಕ ಮೌಲ್ಯಗಳುಳ್ಳ ಹಾಗೂ ಜವಾಬ್ದಾರಿಯುತ ಭಾರತದ ಪ್ರಜೆಗಳನ್ನಾಗಿ ರೂಪಿಸಲು ತರಬೇತಿದಾರರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಕರೆ ನೀಡಿದರು.
ಚಾಮರಾಜನಗರ ಜಿಲ್ಲೆಯ ಸಂತೆಮಾರನಹಳ್ಳಿಯ ಕಾಯಕ ಸೌಧದಲ್ಲಿ ಆಯೋಜಿಸಿದ್ದ "ಸ್ವಾಸ್ತ್ಯ ಸಂಕಲ್ಪ ತರಬೇತಿದಾರರ ತರಬೇತಿ" ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ತರಬೇತಿ ಶಿಬಿರದಲ್ಲಿ ಸ್ವಾಸ್ತ್ಯ ಸಂಕಲ್ಪ ಯೋಜನೆಯ ಪ್ರಮುಖ ಉದ್ದೇಶಗಳು, ತರಬೇತಿದಾರರ ಹೊಣೆಗಾರಿಕೆಗಳು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಉತ್ತಮ ವ್ಯಕ್ತಿತ್ವ ವಿಕಸನ, ಸಾಮಾಜಿಕ ಜವಾಬ್ದಾರಿ ಮತ್ತು ರಾಷ್ಟ್ರಪ್ರೇಮದ ಮೌಲ್ಯಗಳನ್ನು ಯಶಸ್ವಿಯಾಗಿ ಬೆಳೆಸುವ ಕುರಿತು ತರಬೇತಿದಾರರಿಗೆ ವಿಸ್ತೃತ ಮಾರ್ಗದರ್ಶನ ನೀಡಲಾಯಿತು.
ಈ ವೇಳೆ ಕಾರ್ಯಕ್ರಮದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷ ಪ್ರಸಾದ್ ಊರದಹಳ್ಳಿ, ನಿಕಟಪೂರ್ವ ಅಧ್ಯಕ್ಷ ಎಂ.ಎಸ್. ರವಿಶಂಕರ್, ಜಿಲ್ಲಾ ನಿರ್ದೇಶಕ ದಿನೇಶ್ ಎ. ಹಾಗೂ ಜಿಲ್ಲೆಯ ಎಲ್ಲಾ ತಾಲೂಕುಗಳ ಯೋಜನಾಧಿಕಾರಿಗಳು ಮತ್ತು ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿದ್ದರು. ತರಬೇತಿ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿತು.
Kshetra Samachara
25/07/2026 11:21 am
LOADING...