ಚಾಮರಾಜನಗರ: ಜಿಲ್ಲೆಯ ಗಡಿಭಾಗ ತಾಳವಾಡಿ ಸಮೀಪದ ಚಿಕ್ಕಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಆವರಣಕ್ಕೆ ಏಕಾಏಕಿ ಕಾಡಾನೆಯೊಂದು ನುಗ್ಗಿ ತೀವ್ರ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.
ಶಾಲಾ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷವಾಗುತ್ತಿದ್ದಂತೆಯೇ ಸ್ಥಳದಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಯಭೀತರಾಗಿದ್ದರು. ತಕ್ಷಣವೇ ಜಾಗರೂಕರಾದ ಸ್ಥಳೀಯರು ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆಯೇ ತಕ್ಷಣವೇ ಕಾರ್ಯಪ್ರವೃತ್ತರಾದ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಯಶಸ್ವಿಯಾಗಿ ಮತ್ತೆ ದಟ್ಟ ಅರಣ್ಯದೊಳಗೆ ಹಿಮ್ಮೆಟ್ಟಿಸಿದ್ದಾರೆ. ಸಿಬ್ಬಂದಿಯ ಸಮಯಪ್ರಜ್ಞೆಯಿಂದಾಗಿ ಸಂಭಾವ್ಯ ಅನಾಹುತವೊಂದು ತಪ್ಪಿದ್ದು, ಶಾಲಾ ಸಿಬ್ಬಂದಿ ಹಾಗೂ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.
PublicNext
25/07/2026 12:43 pm
LOADING...