ಯಾದಗಿರಿ: ಮಹಾರಾಷ್ಟ್ರ ಮಳೆಗೆ ಕಲ್ಯಾಣ ಕರ್ನಾಟಕ ಭಾಗದ ಬಸವಸಾಗರ ಜಲಾಶಯ ಭರ್ತಿಯಾಗಿದೆ. ಪಶ್ಚಿಮ ಘಟ್ಟಗಳಲ್ಲಿ ಸುರಿಯುತ್ತಿರುವ ಮಳೆಗೆ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು, ಅಪಾರ ಪ್ರಮಾಣದಲ್ಲಿ ನದಿಗೆ ಹರಿದು ಬರುತ್ತಿದೆ. ಇದರಿಂದ
ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿ ಕೃಷ್ಣಾ ನದಿಗೆ ನಿರ್ಮಿಸಿದ ಬಸವಸಾಗರ ಜಲಾಶಯ ಭರ್ತಿಯಾಗಿದೆ.
ಇದರಿಂದ 14 ಕ್ರಸ್ಟ್ ಗೇಟ್ ಮುಖಾಂತರ ನದಿಗೆ 47000 ಕ್ಯೂಸೆಕ್ ನೀರು ನದಿಗೆ ಹರಿಸಲಾಗುತ್ತಿದೆ. ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ನದಿ ಪಾತ್ರದ ಗ್ರಾಮಗಳಿಗೆ ಕುಡಿಯುವ ನೀರಿನ ಸಲುವಾಗಿ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಗ್ರಾಮಗಳಿಗೆ ಎಚ್ಚರಿಕೆ ನೀಡಲಾಗಿದೆ. 70 ಸಾವಿರ ಕ್ಯೂಸೆಕ್ ಒಳಹರಿವಿನ ಮೂಲಕ ಜಲಾಶಯಕ್ಕೆ ನೀರು ಬರುತ್ತಿದೆ. 33 ಟಿಎಮ್ ಸಿ ಸಾಮರ್ಥ್ಯ ದ ಬಸವಸಾಗರ ಜಲಾಶಯ ಸದ್ಯ 31 ಟಿ ಎಮ್ ಸಿಯಷ್ಟು ಭರ್ತಿಯಾಗಿದೆ. ಇಷ್ಟು ದಿನಗಳ ಕಾಲ ನೀರಿಲ್ಲದೆ ಭಣಗುಡುತ್ತಿದ್ದ ಜಲಾಶಯ ಭರ್ತಿಯಾಗಿದ್ದು ರೈತರಲ್ಲಿ ಸಂತಸ ಮೂಡಿಸಿದೆ.
ಜಲಾಶಯದಿಂದ ಎಡದಂಡೆ ಹಾಗೂ ಬಲದಂಡೆ ಕಾಲುವೆಗೆ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಜಲಾಶಯದ ನೀರು ನಂಬಿ ಭತ್ತ,ಶೇಂಗಾ,ಜೋಳ ಬಿತ್ತನೆ ಮಾಡುವ ರೈತರಿಗೆ ವರದಾನವಾಗಲಿದೆ ಮತ್ತು ನೀರಾವರಿ ಸಲಹಾ ಸಮಿತಿ ಸಭೆ ಮಾಡಿ ನೀರು ಹರಿಸುವಂತೆ ರೈತರು ಒತ್ತಾಯ ಮಾಡಿದ್ದಾರೆ. ಜಲಾಶಯದ ನೀರು ನಂಬಿ ಬಿತ್ತನೆ ಮಾಡಿದ ರೈತರಲ್ಲಿ ಆತಂಕ ದೂರವಾಗಿದೆ.
PublicNext
25/07/2026 04:03 pm
LOADING...