ಬೆಂಗಳೂರು: ನ್ಯಾನೋ ತಂತ್ರಜ್ಞಾನಕ್ಕೆ ಸಂಬಂಧಿಸಿದಂತೆ ದೇಶದ ಅತಿದೊಡ್ಡ ಟೆಕ್ ಸಮ್ಮಿಟ್ ಬೆಂಗಳೂರು ಇಂಡಿಯಾ ನ್ಯಾನೋ 14ನೇ ಆವೃತ್ತಿಯು ಇದೇ ಆಗಸ್ಟ್ 3ರಿಂದ 5ರವರೆಗೆ ನಡೆಯಲಿದೆ. ನಗರದ ದಿ ಲಲಿತ್ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ವಿಧಾನಸೌಧದಲ್ಲಿ ಮಾಹಿತಿ ನೀಡಿದ್ದಾರೆ.
ಸ್ಟಾರ್ಟಪ್ ಪ್ರೋತ್ಸಾಹಕ್ಕೆ ಒತ್ತು ನೀಡಿ ವಿದ್ಯಾರ್ಥಿಗಳಿಗೆ ಮನ್ನಣೆ ನೀಡಲಿರುವ ಕಾರ್ಯಕ್ರಮ ಇದಾಗಿದ್ದು, ಮೂರು ದಿನವೂ ವಿವಿಧ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.
ಇನ್ನು ಈ ಆವೃತ್ತಿಯ ಮುಖ್ಯ ಆಶಯವು ‘ನ್ಯಾನೋ ತಂತ್ರಜ್ಞಾನದ ಮುಂದಿನ ಗಡಿ, ಕೃತಕ ಬುದ್ಧಿಮತ್ತೆ ಮತ್ತು ಅದರಾಚೆಗೆ – ಪರಿಕಲ್ಪನೆ, ಸಮನ್ವಯ, ವಾಣಿಜ್ಯೀಕರಣ’ ಆಗಿದೆ.
ಈ ಕಾರ್ಯಕ್ರಮದಲ್ಲಿ ದೇಶ–ವಿದೇಶಗಳ ವಿಜ್ಞಾನಿಗಳು, ಕೈಗಾರಿಕಾ ವಲಯದ ಪ್ರಮುಖರು, ನವೋದ್ಯಮ ಸಂಸ್ಥೆಗಳು, ಹೂಡಿಕೆದಾರರು, ತಂತ್ರಜ್ಞಾನ ಕ್ಷೇತ್ರದ ಪರಿಣಿತರು ಭಾಗವಹಿಸಲಿದ್ದಾರೆ. ಪರಸ್ಪರ ಸಹಭಾಗಿತ್ವ ಉತ್ತೇಜಿಸುವುದರ ಜೊತೆಗೆ, ಅತ್ಯಾಧುನಿಕ ಸಂಶೋಧನೆಗಳನ್ನು ಪರಿಚಯಿಸಿ, ನ್ಯಾನೋ ತಂತ್ರಜ್ಞಾನ ಆಧಾರಿತ ಆವಿಷ್ಕಾರಗಳ ವಾಣಿಜ್ಯೀಕರಣಕ್ಕೆ ವೇಗ ನೀಡುವುದಕ್ಕೆ ಸಮಾವೇಶವು ಸಹಕಾರಿಯಾಗಲಿದೆ.
PublicNext
25/07/2026 06:39 pm
LOADING...