ತುಮಕೂರು: ತುಮಕೂರಿನಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು, ಅದಕ್ಕೆ ಪುಷ್ಟಿ ನೀಡುವಂತೆ ಮತ್ತೊಂದು ಹಲ್ಲೆ ನಡೆದಿರುವುದು ಬೆಳಕಿಗೆ ಬಂದಿದೆ.
ತಡರಾತ್ರಿ 3 ಗಂಟೆ ಸಮಯದಲ್ಲಿ ವ್ಯಕ್ತಿಯೊಬ್ಬನ ಮೇಲೆ ಸುಮಾರು ಹತ್ತಕ್ಕೂ ಹೆಚ್ಚು ಮಂದಿ ಫಿಲ್ಮಿ ಸ್ಟೈಲ್ ನಲ್ಲಿ ಕಾರು ಹಾಗೂ ಬೈಕ್ ನಲ್ಲಿ ಚೇಸ್ ಮಾಡಿ ಕಾರು ಅಡ್ಡಗಟ್ಟಿ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ.
ತುಮಕೂರಿನ ಹೃದಯ ಭಾಗವಾದ ಕುಣಿಗಲ್ ರಸ್ತೆಯ ಪಿಡಬ್ಲ್ಯೂಡಿ ಕಚೇರಿ ಮುಂಭಾಗದಲ್ಲೇ ಘಟನೆ ನಡೆದಿದ್ದು, ಹಲ್ಲೆಗೊಳಗಾದ ಯುವಕ ಯೂನಸ್ ನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ದೃಶ್ಯಾವಳಿ ವೈರಲ್ ಆಗುತ್ತಿದ್ದು , ನಡುರಸ್ತೆಯಲ್ಲಿ ಅಮಾನುಷವಾಗಿ ಹಲ್ಲೆ ನಡೆಸಿರುವುದು ಎದೆ ಝಲ್ ಎನಿಸುವಂತಿದೆ. ಕಾಂಗ್ರೆಸ್ ಮುಖಂಡ ಜೈನ್ ಶೇಖ್ ಸಂಬಂಧಿಯೇ ಹಲ್ಲೆ ಮಾಡಿದ ಪ್ರಮುಖ ಆರೋಪಿ ಎಂಬ ಮಾಹಿತಿ ಹರಿದಾಡುತ್ತಿದೆ.
ಕಾರು ಹಾಗೂ ಬೈಕ್ ನಲ್ಲಿ ಕಿಲೋಮೀಟರ್ ತನಕ ಚೇಸ್ ಮಾಡಿಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ಗಾಯಾಳು ಯುನಸ್ ತಿಳಿಸಿದ್ದಾರೆ. ಪ್ರಕರಣ ಸಂಬಂಧ ತಿಲಕ್ ಪಾರ್ಕ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
PublicNext
25/07/2026 09:39 pm
LOADING...